ರಾಯಚೂರು: ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಯುವಕರು ಕಪ್ಪು ಬಟ್ಟೆ ಧರಿಸಿ ಮತದಾನ ಮಾಡುತ್ತಿದ್ದಾರೆ.
ರಾಯಚೂರಿನ ಶಕ್ತಿನಗರದಲ್ಲಿ ವಿದ್ಯಾರ್ಥಿನಿ ಸಾವಿನ ನ್ಯಾಯಕ್ಕೆ ಯುವಕರು ಆಗ್ರಹಿಸುತ್ತಿದ್ದಾರೆ. ಶಕ್ತಿನಗರದ ಡಿಎವಿ ಪಬ್ಲಿಕ್ ಶಾಲೆಯಲ್ಲಿನ ಮತಗಟ್ಟೆ ಮುಂದೆ ಯುವಕರು ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತಿದ್ದಾರೆ.
Advertisement
Advertisement
ಸಿಐಡಿ ತನಿಖೆ ಬದಲು ಸಿಬಿಐಗೆ ತನಿಖೆ ವಹಿಸಲು ಆಗ್ರಹಿಸುತ್ತಿದ್ದಾರೆ. ಮತದಾನ ಬಹಿಷ್ಕಾರ ಮಾಡುವುದು ಸರಿಯಲ್ಲ ಎಂದು ಮತದಾನ ಮಾಡುತ್ತಿದ್ದೇವೆ ಎಂದು ಕಪ್ಪು ಬಟ್ಟೆ ಧರಿಸಿ ಬಂದಿರುವ ಯುವಕರು ಹೇಳಿದ್ದಾರೆ.
Advertisement
ಏನಿದು ಪ್ರಕರಣ?
ಏಪ್ರಿಲ್ 16 ರಂದು ಮೃತ ವಿದ್ಯಾರ್ಥಿನಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಪೊಲೀಸರು ಡೆತ್‍ನೋಟ್ ನೋಡಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ವಿದ್ಯಾರ್ಥಿನಿ ತಾಯಿ ಇದು ಕೊಲೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಮೃತ ವಿದ್ಯಾರ್ಥಿನಿ ಗೆಳೆಯ ಸುದರ್ಶನ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.