ಬೆಂಗಳೂರು: ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್‍ನ್ನು ಪೊಲಿಸರು ಹೆಡೆಮುರಿ ಕಟ್ಟಿದ್ದಾರೆ.
ಹಲಸೂರು ಗೇಟ್ ಪೊಲೀಸರು ರಾಜು, ಅಪ್ಪು ಹಾಗೂ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳುವಾಗಿದ್ದ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಕ್ ಹ್ಯಾಂಡ್ ಲಾಕ್ ಮುರಿದು ಖದೀಮರು ಕ್ಷಣ ಮಾತ್ರದಲ್ಲಿ ಕಳ್ಳತನ ಮಾಡುತ್ತಿದ್ದರು. ಬ್ಯಾಟರಾಯನಪುರ, ಹಲಸೂರುಗೇಟ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದಾರೆ.
Advertisement
Advertisement
ಮನೆ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದರು. ಬೈಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ ಯಾಗಿತ್ತು. ಬಂಧನ ಬಳಿಕ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಅಚ್ಚರಿಯ ಮಾಹಿತಿಯೊಂದು ಹೊರ ಬಿದ್ದಿದೆ. ಇದನ್ನೂ ಓದಿ: ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
Advertisement
Advertisement
ಆರೋಪಿಗಳು ಬೈಕ್ ಕಳ್ಳತನ ಮಾಡುವ ಬಗ್ಗೆ ಯೂಟ್ಯೂಬ್ ನಲ್ಲಿ ಸರ್ಚ್ ಮಾಡುತ್ತಿದ್ದರು. ಸುಲಭವಾಗಿ ಹೇಗೆ ಬೈಕ್ ಕಳ್ಳತನ ಮಾಡಲು ಸಾಧ್ಯ ಎಂದು ವೀಕ್ಷಿಸುತ್ತಿದ್ದರು. ಅದರಂತೆ ಕ್ಷಣಮಾತ್ರದಲ್ಲಿ ಬೈಕ್ ಕದಿಯುತ್ತಿದ್ದರು. ಇದೀಗ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.