ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯೂಟ್ಯೂಬರ್ ಹಾವಳಿ ಹೆಚ್ಚಾಗಿದೆ. ಸುಮಾರು 50ಕ್ಕೂ ಹೆಚ್ಚು ಬೇಕರಿ ಮಾಲೀಕರಿಗೆ ಬೆದರಿಕೆ ಹಾಕಿದ್ದ ಯೂಟ್ಯೂಬರ್ ಒಬ್ಬನನ್ನ ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ಶಫಿ ಬಂಧಿತ ಆರೋಪಿ. ಯುಟ್ಯೂಬರ್ ಆಗಿದ್ದ ಶಫಿ ನಗರದಲ್ಲಿರುವ ಹಲವು ಬೇಕರಿ ಮಾಲೀಕರಿಗೆ ಸ್ವಚ್ಛತೆಯಿಲ್ಲ, ಮೆಂಟೈನೆನ್ಸ್ ಇಲ್ಲ ಎಂದು ಬೆದರಿಕೆ ಹಾಕುತ್ತಿದ್ದ. ಬೇಕರಿ ಒಳಗೆ ನುಗ್ಗಿ ವೀಡಿಯೋ ಚಿತ್ರೀಕರಣ ಮಾಡಿಕೊಂಡು ಲೈಸೆನ್ಸ್ ರದ್ದು ಮಾಡಿಸ್ತೇನೆ ಅಂತ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಭಾರತೀಯನಾಗಿರುವುದೇ ಅದೃಷ್ಟ, ಭಾರತ ರತ್ನ ಅಭಿಯಾನವನ್ನು ನಿಲ್ಲಿಸಿ ಎಂದಿದ್ದ ರತನ್ ಟಾಟಾ
ಇದೇ ರೀತಿ ಹುಳಿಮಾವು ಬಳಿಯ ಅಕ್ಷಯ್ ನಗರದ ಡಿಎಲ್‌ಎಫ್ ಬಳಿಯ ಬೇಕರಿಗಳಲ್ಲಿ ಬೆದರಿಕೆ ಹಾಕಿದ್ದಾನೆ. ಪತ್ರಕರ್ತ ಅಂತ ಹೇಳಿಕೊಂಡು ಬೇಕರಿ ಮಾಲೀಕರಿಂದ 10,000 ರೂ. ಯುಪಿಎ ಮಾಡಿಸಿಕೊಂಡಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಅವಮಾನಿಸಿದ್ದ ಕಂಪನಿಯನ್ನೇ ಖರೀದಿಸಿ ಮೆರೆದಿದ್ದ ಯಶಸ್ವಿ ಉದ್ಯಮಿ ರತನ್ ಟಾಟಾ!
ʻಪ್ರಜಾಪರʼ ಯೂಟ್ಯೂಬ್ ಚಾನಲ್ ಅಂತ ಹೇಳಿಕೊಂಡು ಧಮ್ಕಿ ಹಾಕಿದ್ದಾನೆ. ಇದೇ ವೇಳೆ ಹಣಕ್ಕೆ ಡಿಮ್ಯಾಂಡ್ ಮಾಡುವಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಬೇಕರಿ ಮಾಲೀಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹುಳಿಮಾವು ಪೋಲಿಸರು ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?