ತಿರುವನಂತಪುರಂ: ಯೂಟ್ಯೂಬ್ (YouTube) ಚಾನಲ್‌ನಲ್ಲಿ ಸಕ್ರಿಯವಾಗಿದ್ದ ದಂಪತಿ ಭಾನುವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದ (Kerrala) ಪರಸ್ಸಾಲ (Parassala) ಪಟ್ಟಣದಲ್ಲಿ ನಡೆದಿದೆ.
ಸೆಲ್ವರಾಜ್ (45), ಪ್ರಿಯಾ (40) ಶವವಾಗಿ ಪತ್ತೆಯಾದ ದಂಪತಿ. ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಲ್ವರಾಜ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಾ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ ಎಂದು ಪರಸ್ಸಾಲ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್ ಸುಪ್ರೀಂ ಲೀಡರ್
- Advertisement
ಪ್ರಾಥಮಿಕ ತನಿಖೆಯ ಪ್ರಕಾರ, ಎರಡು ದಿನಗಳ ಹಿಂದೆ ಘಟನೆ ಸಂಭವಿಸಿರಬಹುದು ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ
- Advertisement
ಸೆಲ್ವರಾಜ್ ಹಾಗೂ ಪ್ರಿಯಾ ದಂಪತಿ ‘ಸೆಲ್ಲು ಫ್ಯಾಮಿಲಿ’ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಅವರ ಚಾನಲ್ ಸುಮಾರು 18,000 ಫಾಲೋವರ್ಸ್ ಅನ್ನು ಹೊಂದಿದ್ದು, 1,400ಕ್ಕೂ ಹೆಚ್ಚು ವೀಡಿಯೋಗಳನ್ನು ತಮ್ಮ ಚಾನಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೊನೆಯದಾಗಿ ಅ.25ರಂದು (ಶುಕ್ರವಾರ) ತಮ್ಮ ಫ್ಯಾಮಿಲಿ ಫೋಟೋಗಳನ್ನ ಎಡಿಟಿಂಗ್ ಮಾಡಿ 55 ಸೆಕೆಂಡುಗಳ ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದರು. ಇದನ್ನೂ ಓದಿ: ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ