– 2ನೇ ದಿನವೂ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರು
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಎಐ ವಿಡಿಯೋ ಮೂಲಕ ಸಂಚಲನ ಸೃಷ್ಟಿಸಿದ್ದ ಯೂಟ್ಯೂಬರ್ ಸಮೀರ್ (Youtuber Sameer MD) ಸೋಮವಾರ (ಆ.25) ಮತ್ತೆ ಬೆಳ್ತಂಗಡಿ ಠಾಣೆಗೆ (Belthangady Police Station) ವಿಚಾರಣೆಗೆ ಹಾಜರಾಗಿದ್ದಾನೆ.
ಬೆಳ್ತಂಗಡಿ ಠಾಣೆಯಲ್ಲಿ ಸಮೀರ್ ವಿಚಾರಣೆ ಆರಂಭವಾಗಿದ್ದು, ಪಿಎಸ್‌ಐ ಸುಬ್ಬಾಪುರ್ ಮಠ್ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.ಇದನ್ನೂ ಓದಿ: ಕೇಜ್ರಿವಾಲ್ ಪ್ರಕರಣ ಉಲ್ಲೇಖಿಸಿ ವಿಪಕ್ಷಗಳಿಗೆ ತಿರುಗೇಟು – ಪಿಎಂ, ಸಿಎಂ ವಜಾ ಮಸೂದೆ ಸಮರ್ಥಿಸಿಕೊಂಡ ಅಮಿತ್ ಶಾ
ಕಾಲ್ಪನಿಕ ವಿಡಿಯೋ ಮೂಲಕ ದೊಂಬಿ ಸೃಷ್ಟಿಯಲು ಯತ್ನಿಸಿದ್ದಾನೆ ಎಂದು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಪೊಲೀಸರು ಎರಡೆರಡು ನೊಟೀಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ (ಆ.24) ಬೆಳ್ತಂಗಡಿ ಠಾಣೆಯಲ್ಲಿ ನಾಲ್ವರು ವಕೀಲರ ಜೊತೆ ಸಮೀರ್ ಹಾಜರಾಗಿದ್ದ. ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಅಧಿಕಾರಿಗಳು 4:30 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ದೂತನ ಬಂಡವಾಳ ಬಯಲು
ಇಲ್ಲ ಸಲ್ಲದ ಸುಳ್ಳು ಕತೆಗಳನ್ನು ಸೃಷ್ಟಿಸಿ ಎಲ್ಲರನ್ನೂ ಮರಳು ಮಾಡಿದ್ದವನೇ ಯೂಟ್ಯೂಬರ್ ಸಮೀರ್ ಎಂ.ಡಿ. ಯಾವುದೋ ಕೋಣೇಲಿ ಕೂತ್ಕೊಂಡು ಎಐ ವಿಡಿಯೋಗಳ ಮೂಲಕ ಜನರಿಗೆ ಮಂಕುಬೂದಿ ಎರಚಿ ಲೈಕ್ಸ್, ವೀವ್ಸ್ ಪಡೆದಿದ್ದ ದೂತನ ಬಂಡವಾಳ ಬಯಲಾಗಿದೆ. ತಾನು ಹೇಳಿದ್ದೇ ಸತ್ಯ ಅಂತ ನಂಬಿಸಿ, ಶಿವತಾಂಡವ ಶುರುವಾಗುತ್ತೆ. ನೋಡಿ ಸತ್ಯ ಹೇಗೆ ಹೊರಬರುತ್ತದೆ? ಎಲ್ಲದಕ್ಕೂ ಸಾಕ್ಷ್ಯ ಇದೆ ಅಂತಾ ಪುಂಖಾನುಪುಂಖವಾಗಿ ಸುಳ್ಳಿನ ಅರಮನೆಯನ್ನೇ ಕಟ್ಟಿದ್ದ. ದೂರುದಾರನಿಗೆ ಭೀಮ ಎಂದು ಹೆಸರಿಟ್ಟಿದ್ದೇ ಸುಳ್ಳುಕೋರ ಸಮೀರ್. ಅನನ್ಯಾ ಭಟ್ ಎನ್ನುವ ನಕಲಿ ಯುವತಿಯನ್ನು ಸೃಷ್ಟಿಸಿ ಧರ್ಮಸ್ಥಳ ಕ್ಷೇತ್ರಕ್ಕೆ, ಭಕ್ತರ ಭಾವನೆಗೆ ಚ್ಯುತಿ ಬರುವಂತೆ ಮಾಡಿದ್ದೇ ಈತ. ಬೀದಿಗೆ ಬನ್ನಿ ಹೋರಾಟ ಮಾಡಿ ಅಂತಾನೂ ಕರೆ ಕೊಟ್ಟಿದ್ದ. ಈತನ ವಿಡಿಯೋಗೆ ಫಂಡಿಂಗ್ ಬರುತ್ತಿದೆ ಅನ್ನೋ ಆರೋಪವೂ ಇದೆ.ಇದನ್ನೂ ಓದಿ: ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ: ಪ್ರತಾಪ್ ಸಿಂಹ ಪ್ರಶ್ನೆ