ಭುವನೇಶ್ವರ: ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ (YouTuber) ಕೊಚ್ಚಿಹೋದ ಘಟನೆ ಒಡಿಶಾದ (Odisha) ಕೊರಾಪುಟ್ (Koraput) ಜಿಲ್ಲೆಯಲ್ಲಿ ನಡೆದಿದೆ.
ದುಡುಮಾ ಜಲಪಾತದಲ್ಲಿ (Duduma Waterfall) ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ ಯೂಟ್ಯೂಬ್ ಚಾನೆಲ್‌ಗಾಗಿ ಪ್ರಮುಖ ಪ್ರವಾಸಿ ತಾಣಗಳ ವೀಡಿಯೋಗಳನ್ನು ಚಿತ್ರೀಕರಿಸಲು ಬಂದಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್ ಫೈನ್ ಕಟ್ಟೋ ಮುನ್ನ ಎಚ್ಚರವಾಗಿರಿ
ಕಟಕ್‌ನಿಂದ ತನ್ನ ಸ್ನೇಹಿತ ಅಭಿಜಿತ್ ಬೆಹೆರಾ ಜೊತೆ ಕೊರಾಪುಟ್‌ಗೆ ಬಂದಿದ್ದ ಸಾಗರ್ ಜಲಪಾತದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರೀಲ್ ರೆಕಾರ್ಡ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಲಪಾತದಲ್ಲಿ ಹಠಾತ್ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಬಂಡೆಯ ಮೇಲೆ ನಿಂತಿದ್ದ ಸಾಗರ್ ಕೊಚ್ಚಿಹೋಗಿದ್ದಾನೆ. ನಾಪತ್ತೆಯಾಗಿರುವ ಸಾಗರ್‌ಗಾಗಿ ಅಗ್ನಿಶಾಮಕ ದಳ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11