– ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡುವುದು ನನ್ನ ತಂದೆ ಕನಸಾಗಿತ್ತು: ಶರ್ಮಿಳಾ
ನವದೆಹಲಿ: ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ಪುತ್ರಿ, ಹಾಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಸಹೋದರಿ, ವೈಎಸ್‌ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್.ಶರ್ಮಿಳಾ (Y.S.Sharmila) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
Advertisement
ದೆಹಲಿಯ ಕಾಂಗ್ರೆಸ್ (Congress) ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ಸಂಸದ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿ ಸೇರ್ಪಡೆಯಾದರು. ಸಹೋದರ ವೈಎಸ್ ಜಗನ್‌ಮೋಹನ್ ರೆಡ್ಡಿ ಜೊತೆಗೆ ಭಿನ್ನಾಭಿಪ್ರಾಯಗಳ ಬಳಿಕ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಟ್ಟಿದ್ದರು. ಇತ್ತಿಚೇಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು. ಈಗ ಅವರು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಿ ತಮ್ಮ ಪಕ್ಷವನ್ನು ವಿಲೀನಗೊಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡೋದನ್ನು ತಡೆಯಲು ಸಮನ್ಸ್: ಕೇಜ್ರಿವಾಲ್ ಕಿಡಿ
Advertisement
Advertisement
ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ. ಅದು ಎಲ್ಲಾ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುತ್ತಿದೆ. ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ತನ್ನ ತಂದೆಯ ಕನಸಾಗಿತ್ತು. ಅದಕ್ಕೆ ಕೊಡುಗೆ ನೀಡಲು ಸಂತೋಷಪಡುತ್ತೇನೆ ಎಂದು ಅವರು ಹೇಳಿದ್ದಾರೆ.
Advertisement
ಪಕ್ಷ ಯಾವುದೇ ಜವಾಬ್ದಾರಿ ನೀಡಿದರು ಅದನ್ನು ನಾನು ನಿಭಾಯಿಸುತ್ತೇನೆ. ಶೀಘ್ರದಲ್ಲಿ ಲೋಕಸಭೆ ಚುನಾವಣೆಗೆ ಬ್ಲೂ ಪ್ರಿಂಟ್ ತಯಾರಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು
ವೈಎಸ್ ಶರ್ಮಿಳಾ ಅವರ ಪತಿ ಅನಿಲ್ ಕುಮಾರ್ ಮಾತನಾಡಿ, ನಾವು ಕಾಂಗ್ರೆಸ್ ಕುಟುಂಬದ ಭಾಗವಾಗಲು ಬಯಸುತ್ತೇವೆ. ಅವರು ಪಕ್ಷದ ನಿರ್ಧಾರಗಳಿಗೆ ಬದ್ಧರಾಗುತ್ತಾರೆ. ನಾವು ಕಾಂಗ್ರೆಸ್ ಸೇರುವುದು ಆಂಧ್ರಪ್ರದೇಶದ ರಾಜಕೀಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.