ಚಿಕ್ಕಮಗಳೂರು: ಮೊನ್ನೆ ಮೊನ್ನೆ ಮುಗಿದ 2023ರ ವಿಧಾನಸಭಾ ಚುನಾವಣೆಯಲ್ಲಿ (Election) ಜಿಲ್ಲೆಯ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ (JDS) ಸ್ಪರ್ಧಿಸಿದ್ದ ಮಾಜಿ ಶಾಸಕ ವೈಎಸ್‌ವಿ ದತ್ತ (YSV Datta) ಈ ಬಾರಿಯೂ ಸೋತಿದ್ದಾರೆ. ಇದೀಗ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆಗೆ ದತ್ತ ಮುಂದಾಗಿದ್ದಾರೆ.
ಚುನಾವಣೆಗೂ ಮುನ್ನ ಇದು ನನ್ನ ಕಡೆ ಎಲೆಕ್ಷನ್ ಎಂದಿದ್ದ ದತ್ತ ಇಂದಿಗೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
Advertisement
Advertisement
ಕಡೂರಿಗರು ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ನಾನಾಗಲೀ ಅಥವಾ ನಮ್ಮ ಕುಟುಂಬವಾಗಲಿ ಈ ಕ್ಷೇತ್ರವನ್ನು ಮರೆಯಲು ಸಾಧ್ಯವಿಲ್ಲ. ಕಡೂರು ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ನನ್ನ ಕೊನೆಯುಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಹಲವಾರು ತಪ್ಪುಗಳಿಗೆ ಜನರು ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಅದಕ್ಕಾಗಿ ಪ್ರಾಯಾಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್ ಮುಂದೆ ಸಿದ್ದು, ಡಿಕೆಶಿ ವಾದ ಏನು?
Advertisement
ಜೂನ್ 24 ನನ್ನ ಜನ್ಮದಿನ. ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆಯ ಮೂಲಕ ತೆರಳಿ ನನ್ನ ತಪ್ಪುಗಳಿಗಾಗಿ ಕ್ಷಮೆ ಕೋರುತ್ತೇನೆ. ಪಾದಯಾತ್ರೆಯಲ್ಲಿ ಹಳ್ಳಿಗಳಲ್ಲೇ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಈ ಸಂಕಲ್ಪ ಯಾವುದೇ ಚುನಾವಣಾ ದೃಷ್ಟಿಯಿಂದ ಮಾಡಿಲ್ಲ. ಕೇವಲ ನನ್ನ ಆತ್ಮಾವಲೋಕನ ಮಾತ್ರ. ಎಲ್ಲ ವಿವರಗಳನ್ನು ತಮಗೆ ತಿಳಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
Advertisement
ದತ್ತ ಈ ಮಾತುಗಳನ್ನು ಹೇಳುತ್ತಿದ್ದಂತೆ ಕಾರ್ಯಕರ್ತರು ತಪ್ಪು ಮಾಡಿದ್ದು ಯಾರೋ, ನೀವ್ಯಾಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು ಎಂದಿದ್ದಾರೆ. ತಮ್ಮ ನಿರ್ಧಾರವನ್ನು ಕೈಬಿಡಬೇಕು ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ. ಆದರೆ ದತ್ತ ನನ್ನ ನಿರ್ಧಾರ ಅಚಲ ಎಂದಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ – ಮಳವಳ್ಳಿ ಬಿಜೆಪಿ ಪರಾರ್ಜಿತ ಅಭ್ಯರ್ಥಿ