‘ಯುವ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ : ಯುವ ರಾಜಕುಮಾರ್ ಚೊಚ್ಚಲ ಚಿತ್ರ

Public TV
1 Min Read
Yuva

ಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ‘ಕೆ ಜಿ ಎಫ್’, ‘ಕಾಂತಾರ’ ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ (Hombale Films) ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಜನಪ್ರಿಯ ಚಿತ್ರಗಳ ನಿರ್ದೇಶಕ ಸಂತೋಷ್ ಆನಂದರಾಮ್ (Santhosh Anand Ram) ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಚೊಚ್ಚಲ ಚಿತ್ರ ‘ಯುವ’ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ.

yuva rajkumar 1

ಬಹು ನಿರೀಕ್ಷಿತ ಈ ಚಿತ್ರ 2024 ರ ಮಾರ್ಚ್ 28 ರಂದು ಬಿಡುಗಡೆಯಾಗುತ್ತಿದೆ. ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹೊಂಬಾಳೆ ಫಿಲಂಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಈ ಸಿನಿಮಾದಲ್ಲಿ ಯುವರಾಜಕುಮಾರ್ (Yuvraj Kumar) ನಾಯಕನಾಗಿ ನಟಿಸುತ್ತಿದ್ದಾರೆ. ಸಪ್ತಮಿ ಗೌಡ  ಅವರು ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ.

 

ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article