ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ (Yuva Nidhi Scheme) ಡಿಸೆಂಬರ್ 26 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪದವೀಧರರು ಸೇವಾಸಿಂಧು (Seva Sindhu) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ (Belagavi) 2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಡಿಸೆಂಬರ್ 26ರಿಂದ ಅರ್ಜಿ ಸಲ್ಲಿಕೆ ಕಾರ್ಯ ಆರಂಭವಾಗಲಿದ್ದು, ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹರು ಅರ್ಜಿ ಸಲ್ಲಿಸಬಹುದು. 2024ರ ಜನವರಿ ತಿಂಗಳಿನಿಂದ ಈ ಯೋಜನೆ ಜಾರಿಗೆ ಬರಲಿದೆ. ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ. ಸದರಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಆರಂಭಿಸಬೇಕು. ಎಲ್ಲ ಅರ್ಹ ನಿರುದ್ಯೋಗಿಗಳಿಗೆ ಅಗತ್ಯ ಮಾಹಿತಿ ನೀಡಲು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
Advertisement
ಯುವನಿಧಿ ಯೋಜನೆ ಎಂದರೇನು?
ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‌ಗಳನ್ನು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆಯಾಗಿದೆ. ಪದವೀದಧರರಿಗೆ 3,000 ರೂ. ಮತ್ತು ಡಿಪ್ಲೊಮಾ ತೇರ್ಗಡೆಯಾದವರಿಗೆ 1,500 ರೂ. ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು. ಇದನ್ನೂ ಓದಿ: PublicTV Explainer: ‘ಯುವನಿಧಿ’ ಪಡೆಯಲು ಈ ವಿಷಯ ಗೊತ್ತಿರಲಿ..
Advertisement
ಯುವನಿಧಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬಹುದು?
ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣದಲ್ಲಿ ಅರ್ಜಿ ಸಲ್ಲಿಸುವುದು. https://sevasindhugs.karnataka.gov.in/
ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಅರ್ಹತೆಗಳೇನು?
ಪದವಿ/ಡಿಪ್ಲೊಮಾ ಕೋರ್ಸ್‌ಗಳನ್ನು 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡಿರಬೇಕು. 2023 ರಲ್ಲಿ ತೇರ್ಗಡೆಯಾಗಿದ್ದು, 180 ದಿನಗಳ ವರೆಗೆ ನಿರುದ್ಯೋಗಿಗಳಾಗಿ ಅಭ್ಯರ್ಥಿಗಳು ಕನಿಷ್ಠ 6 ವರ್ಷ ಕರ್ನಾಟಕ ರಹವಾಸಿಗಳಾಗಿರಬೇಕು. ಇದನ್ನೂ ಓದಿ: ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ – ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ: ಕೆಇಎ
ಯುವನಿಧಿ ಯೋಜನೆಗೆ ಯಾರು ಅನರ್ಹರು?
ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವವರು, ಸ್ವ-ಉದ್ಯೋಗಿಗಳು, ಕನಿಷ್ಠ 6 ವರ್ಷ ಕರ್ನಾಟಕ ರಹವಾಸಿಗಳಲ್ಲದವರು ಮತ್ತು ಪದವಿ/ಡಿಪ್ಲೊಮಾ ಕೋರ್ಸನ್ನು ಕರ್ನಾಟಕ ಹೊರತಾಗಿ ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದವರು, ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವವರು ಅನರ್ಹರು.