ಬೆಂಗಳೂರು: ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದು ಶ್ರೀದೇವಿ ಭೈರಪ್ಪ (Sridevi Byrappa) ಹೇಳಿದ್ದಾರೆ.
ಡಿವೋರ್ಸ್‌ಗಾಗಿ ಯುವರಾಜ್‌ಕುಮಾರ್ (Yuva Rajkumar) ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?
ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ. ಇದನ್ನೂ ಓದಿ: Modi 3.0 Cabinet: 72 ಸಚಿವರಲ್ಲಿ 61 ಮಂದಿ ಬಿಜೆಪಿಗರು – ಮಿತ್ರಪಕ್ಷಗಳಲ್ಲಿ ಯಾರಿಗೆ ಎಷ್ಟು ಸ್ಥಾನ?
ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ ಎಂದು ಬರೆದಿದ್ದಾರೆ.