ಯುವರಾಜ್‌ಕುಮಾರ್‌ ಡಿವೋರ್ಸ್ ನೋಟಿಸ್ ವಿಚಾರವಾಗಿ ಶ್ರೀದೇವಿ ಫಸ್ಟ್ ರಿಯಾಕ್ಷನ್

Public TV
1 Min Read
yuva rajkumar 1 1

ದೊಡ್ಮನೆ ಕುಡಿ ಯುವರಾಜ್‌ಕುಮಾರ್ (Yuva Rajkumar) ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪತ್ನಿ ಮಾನಸಿಕ ಕಿರುಕುಳ ಕೊಡ್ತಿದ್ದಾರೆ ಎಂದು ಉಲ್ಲೇಖಿಸಿ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುವ ನೀಡಿರುವ ಡಿವೋರ್ಸ್ ನೋಟಿಸ್ ವಿಚಾರವಾಗಿ ಶ್ರೀದೇವಿ (Sridevi) ಪಬ್ಲಿಕ್ ಟಿವಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

yuva

ಏನಾಗಿದೆ ಅನ್ನೋ ವಿಷಯ ಚಿತ್ರರಂಗ ಮತ್ತು ಮಾಧ್ಯಮದಲ್ಲಿ ಅನೇಕರಿಗೆ ತಿಳಿದಿದೆ. ನಾನು ಈಗಾಗಲೇ ಲೀಗಲ್ ನೋಟಿಸ್‌ಗೆ ಉತ್ತರಿಸಿದ್ದೇನೆ. ವಿಚ್ಛೇದನ ಅರ್ಜಿ ಪ್ರತಿಯು ಇನ್ನೂ ನನ್ನ ಕೈ ತಲುಪಿಲ್ಲ. ನನಗೆ ಸಿಕ್ಕಾಗ ನ್ಯಾಯಾಲಯಕ್ಕೆ ಉತ್ತರಿಸುತ್ತೇನೆ. ಸದ್ಯಕ್ಕೆ ನಾನು ಬೇರೇನೂ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ಎಲ್ಲರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತೀರಾ ಎಂದು ಭಾವಿಸುತ್ತೇನೆ ಎಂದು ಶ್ರೀದೇವಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನಿವೇದಿತಾ ಕೋಟ್ಯಂತರ ರೂಪಾಯಿ ಜೀವನಾಂಶಕ್ಕೆ ಬೇಡಿಕೆಯಿಟ್ಟಿಲ್ಲ: ಚಂದನ್‌ ಶೆಟ್ಟಿ

yuva rajkumar

7 ವರ್ಷಗಳು ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ. ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಕೆಲ ತಿಂಗಳುಗಳಿಂದ ಇಬ್ಬರೂ ಜೊತೆಯಾಗಿ ಕೂಡ ವಾಸಿಸುತ್ತಿಲ್ಲ. ಇನ್ನೂ ‘ಯುವ’ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿರಲಿಲ್ಲ. ಸದ್ಯ ಶ್ರೀದೇವಿ ಅವರು ವಿದೇಶದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

ಮೈಸೂರು ಮೂಲದ ಶ್ರೀದೇವಿರನ್ನು ಯುವ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯ ಮೇರೆಗೆ 2018ರಲ್ಲಿ ಯುವರಾಜ್‌ಕುಮಾರ್ ನಿಶ್ಚಿತಾರ್ಥ ನಡೆಯಿತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು.

Share This Article