ಯುವರಾಜಕುಮಾರ್ (Yuva Rajkumar) ಹೊಸ ಸಿನಿಮಾದ ಮಹತ್ವದ ವಿಷಯಗಳು ಇಂದು ಅನಾವರಣಗೊಳ್ಳಲಿವೆ. ಕಳೆದ ಒಂದು ವರ್ಷದಿಂದ ಈ ಸಿನಿಮಾದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹೊರ ಬರುತ್ತಿದ್ದವು. ಇಂದು ನಾಳೆ ಅಂದುಕೊಂಡು ಒಂದು ವರ್ಷಗಳ ಕಾಲ ಸಿನಿಮಾದ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಇವತ್ತು ಹಲವು ವಿಚಾರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ಅಲ್ಲಿಗೆ ಅಧಿಕೃತ ಮಾಹಿತಿಗಳು ಹೊರಬೀಳಲಿವೆ.
Advertisement
ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು ಸಂಜೆ 5.45 ಗಂಟೆಗೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6.55ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ. ಅಲ್ಲದೇ, ಕುರುಬರಹಳ್ಳಿಯ ಡಾ.ರಾಜ್ ಪ್ರತಿಮೆಯ ಮುಂದೆಯೇ ಟೀಸರ್ ತೋರಿಸಲಾಗುತ್ತಿದೆ. ಇದನ್ನೂ ಓದಿ: ಮತ್ತೆ ಕಿರುತೆರೆಗೆ ಮರಳಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ
Advertisement
Advertisement
ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.
Advertisement
ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.
ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾಮ್ (Santhosh Anand Ram) ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.