ಬೆಂಗಳೂರು: ಉನ್ನತ ಹುದ್ದೆ ಕೊಡಿಸುವ ಆಮಿಷವೊಡ್ಡಿ ನೂರಾರು ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದ ಯುವರಾಜ್ ಸ್ವಾಮಿ, ಮೂರು ತಿಂಗಳ ಹಿಂದೆ ಷರತ್ತು ಬದ್ಧ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಮತ್ತೆ ಜೈಲು ಸೇರಿದ್ದಾರೆ.
Advertisement
ಯುವರಾಜ್ ಸ್ವಾಮಿ, ವಂಚನೆ ಆರೋಪಕ್ಕೆ ಸಿಲುಕಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿ ಬಳಿಕ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಅನಾರೋಗ್ಯದ ಕಾರಣ ಕೊಟ್ಟು 3 ತಿಂಗಳ ಹಿಂದೆ ಬಿಡುಗಡೆಗೊಳಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ್ದ ಕೋರ್ಟ್ ಅನಾರೋಗ್ಯ ಕಾರಣದಿಂದಾಗಿ 3 ತಿಂಗಳ ಕಾಲ ಜಾಮೀನು ಮಂಜೂರು ಮಾಡಿತ್ತು. ಇದೀಗ 3 ತಿಂಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಯುವರಾಜ್ ಸ್ವಾಮಿ ಮತ್ತೆ ಜೈಲು ಸೇರಿದ್ದಾರೆ. ಇದನ್ನೂ ಓದಿ: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಯುವರಾಜ್ ಸ್ವಾಮಿ ಜೈಲಿನಿಂದ ಬಿಡುಗಡೆ
Advertisement
ಯುವರಾಜ್ ಸ್ವಾಮಿ ಮೇಲಿನ ಆರೋಪವೇನು?
ಸಿಸಿಬಿ ಪೊಲೀಸರು ಯುವರಾಜ್ ಮನೆಯ ಮೇಲೆ ದಾಳಿ ಮಾಡಿದ್ದ ವೇಳೆ ಬರೋಬ್ಬರಿ 89ಕ್ಕೂ ಹೆಚ್ಚು ದಾಖಲೆಗಳನ್ನು ಸೀಜ್ ಮಾಡಿದ್ದರು. ಯುವರಾಜ್‍ನ ಪರ್ಸನಲ್ ಹಾಗೂ ಬ್ಯಾಂಕ್, ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು. ಅಲ್ಲದೆ ಇದೇ ಸಂದರ್ಭದಲ್ಲಿ ಅನೇಕ ಗಣ್ಯರಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿತ್ತು. ಈ ಬಗ್ಗೆ ಎಲ್ಲ ಪಿನ್ ಟು ಪಿನ್ ದಾಖಲೆಗಳನ್ನು ಪೊಲೀಸರು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಿದ್ದರು. ಇದನ್ನೂ ಓದಿ: ನಟಿ ರಾಧಿಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಯುವರಾಜ್ ಜೊತೆಗೆ ಸ್ವೀಟಿಗೂ ಕಂಟಕ ಫಿಕ್ಸಾ
Advertisement
Advertisement
ಪ್ರಮುಖ ದಾಖಲೆಗಳು
ಚಾರ್ಜ್ ಶೀಟ್ ನಲ್ಲಿ ಹೇಳಿರುವ ಕೆಲವು ಪ್ರಮುಖ ದಾಖಲೆಗಳ ಲಭ್ಯವಾಗಿದ್ದು, ಇದರಲ್ಲಿ ಸಚಿವ ಮುರಗೇಶ್ ನಿರಾಣಿ ಲೇಟರ್ ಹೆಡ್ ಮತ್ತು ಬಯೋಡೆಟಾ, ಪ್ರಮೋದ್ ಮಧ್ವರಾಜ್ ಲೇಟರ್ ಹೆಡ್, ಬಯೋಡೆಟಾ, ಉಮೇಶ್ ಕತ್ತಿಯವರ ಲೇಟರ್ ಹೆಡ್, ಬಯೋಡೆಟಾ ಹಾಗೂ ಸಚಿವ ಶ್ರೀರಾಮುಲು ಅವರಿಗೆ ಸೇರಿದ ಕೆಲ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿತ್ತು. ಮುತ್ತಪ್ಪ ರೈಗೆ ಸೆಕ್ಯೂರಿಟಿ ಕೋರಿ ಶ್ರೀರಾಮುಲು ಹೆಸರಲ್ಲಿ ಪತ್ರ ಬರೆದಿರುವುದು ಸಹ ಸಿಕ್ಕಿತ್ತು. ಇದನ್ನೂ ಓದಿ: ನಾಳೆಯಿಂದ ಜ.4ರ ವರೆಗೆ ರಾತ್ರಿ 10 ಗಂಟೆಯಿಂದ ಎಲ್ಲಾ ಫ್ಲೈಓವರ್ ಕ್ಲೋಸ್: ಕಮಲ್ ಪಂಥ್
ಬಿಜೆಪಿ ಪಕ್ಷದ ಹೆಸರಿನ ಅನೇಕ ಲೇಟರ್ ಹೆಡ್ ಸಮೇತ ಪತ್ರಗಳು, ಉಪಚುನಾವಣೆಗೆ ವಸಂತ್ ಬೆಳವಾಯಿ ಟಿಕೆಟ್ ಕೋರಿಕೆ ಪತ್ರ. ಟಿ.ಶ್ಯಾಮ್ ಭಟ್ ವಯಕ್ತಿಕ ಸೇವಾ ವಿವರ ಇರುವ ದಾಖಲೆಗಳು, ನಿವೃತ್ತ ಜಡ್ಜ್ ಇಂದ್ರಕಲಾ ಅವರ ಪರ್ಸನಲ್ ಪ್ರೊಫೈಲ್ ಗಳು ಲಭ್ಯವಾಗಿತ್ತು. 9 ಮಂದಿ ಸಾಕ್ಷಿಗಳ ಸಮೇತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಯುವರಾಜ್ ಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 504, 506 ಅಡಿ ಚಾರ್ಜ್ ಸಲ್ಲಿಸಲಾಗಿದೆ. ಮಾಡಿದ ಕೃತ್ಯವನ್ನು ಯುವರಾಜ್ ಸ್ವಾಮಿ ಪೊಲೀಸರ ಮುಂದೆ ಒಪ್ಪಿಕೊಂಡು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.