ಮುಂಬೈ: ಪತ್ನಿ ಹ್ಯಾಝೆಲ್ ಕೀಚ್ ಹುಟ್ಟುಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಶುಭಾಶಯ ಕೋರಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಅಮ್ಮ ಕರಡಿ ಒಬ್ಬರೇ ಹೆಚ್ಚು ಕೇಕ್ ತಿನ್ನಬೇಡಿ. ಶೀಘ್ರದಲ್ಲೇ ನನ್ನ ಮಗು ಮತ್ತು ನಿಮ್ಮನ್ನು ಭೇಟಿಯಾಗುತ್ತೇನೆ ಅಂತ ಬರೆದುಕೊಂಡಿದ್ದಾರೆ. ಯುವರಾಜ್ ಅವರಲ್ಲದೆ, ಭಾರತದ ಮಾಜಿ ವೇಗಿ ಜಹೀರ್ ಖಾನ್ ಅವರ ಪತ್ನಿ ಮತ್ತು ನಟಿ ಸಾಗರಿಕಾ ಘಾಟ್ಗೆ ಕೂಡ ಹೇಜಲ್‍ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ
View this post on Instagram
ಯುವರಾಜ್ 2016 ರಲ್ಲಿ `ಬಾಡಿಗಾರ್ಡ್’ ಖ್ಯಾತಿಯ ನಟಿ ಹ್ಯಾಝೆಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೇ ಕಳೆದ ತಿಂಗಳು ಜನವರಿಯಲ್ಲಿ, ದಂಪತಿ ತಮ್ಮ ಮೊದಲ ಗಂಡು ಮಗುವನ್ನು ಸ್ವಾಗತಿಸಿದರು. ಇದನ್ನೂ ಓದಿ: ಮಗು ಕಳೆದುಕೊಂಡ ದುಃಖದಲ್ಲೇ ರಣಜಿ ಆಡುತ್ತಿದ್ದ ವಿಷ್ಣು ಸೋಲಂಕಿಗೆ ಮತ್ತೊಂದು ಆಘಾತ
ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಕೂಡ ನೀಡಿದ್ದರು. ಎಲ್ಲಾ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರಿಗೆ ತಿಳಿಸುವುದೆನೆಂದರೆ ಇಂದು ದೇವರು ನಮಗೆ ಗಂಡು ಮಗುವನ್ನು ಆಶೀರ್ವದಿಸಿದ್ದಾನೆ ಅಂತ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಈ ಆಶೀರ್ವಾದಕ್ಕಾಗಿ ನಾವು ದೇವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಲವ್ ಯೂ ಹ್ಯಾಝೆಲ್ ಎಂದಿದ್ದರು.