ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಮತ್ತು ರಾಜಸ್ಥಾನ ನಡುವಿನ ಪಂದ್ಯದ ನಡುವೆ ನಡೆದ ನೋ ಬಾಲ್ ವಿವಾದ ಬಾರಿ ಚರ್ಚೆಯಾಗುತ್ತಿದೆ. ಈ ನಡುವೆ ಕುಲ್ಚಾ ಜೋಡಿ ಖ್ಯಾತಿಯ ಯಜುವೇಂದ್ರ ಚಹಲ್ ಮತ್ತು ಕುಲ್‍ದೀಪ್ ಯಾದವ್ ನಡುವಿನ ಮಾತುಕತೆ ವೈರಲ್ ಆಗುತ್ತಿದೆ.
ರಾಜಾಸ್ಥಾನ್ ರಾಯಲ್ಸ್ ನೀಡಿದ 222 ರನ್‍ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತ್ತಾದರೂ ನಂತರದಲ್ಲಿ ಪ್ರಮುಖ ವಿಕೆಟ್‍ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ರೋವ್ಮನ್ ಪೋವೆಲ್ ಅವರ ಆಟ ತಂಡಕ್ಕೆ ಗೆಲುವಿನ ಆಸೆ ಚಿಗುರುವಂತೆ ಮಾಡಿತ್ತು. ಅಂತಿಮ ಓವರ್‌ನಲ್ಲಿ ಡೆಲ್ಲಿ ಗೆಲುವಿಗೆ 36 ರನ್‍ಗಳು ಬೇಕಾಗಿತ್ತು. ಆರು ಬಾಲ್‍ನಲ್ಲಿ 6 ಸಿಕ್ಸರ್ ಸಿಡಿಸುವ ಸವಾಲು ಎದುರಾಗಿತ್ತು. ಶೇ.90 ರಷ್ಟು ಗೆಲುವು ಅಸಾಧ್ಯ ಎಂಬುದೂ ಗೊತ್ತಿತ್ತು. ಈ ವೇಳೆ ಕ್ರೀಸ್‍ನಲ್ಲಿದ್ದ ಪೋವೆಲ್ ಸತತ 3 ಎಸೆತಗಳನ್ನೂ ಸಿಕ್ಸರ್‌ಗೆ ಅಟ್ಟಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವ ವೇಳೆ ದೊಡ್ಡ ಹೈಡ್ರಾಮವೇ ನಡೆದು ಹೋಯಿತು. ಇದನ್ನೂ ಓದಿ: ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?
ಮೆಕಾಯ್ ಅವರ 3 ಎಸೆತಗಳನ್ನೂ ಸಿಕ್ಸ್ ಬಾರಿಸಿದ್ದರು. ಆದರೆ, 3ನೇ ಎಸೆತ ಫುಲ್‍ಟಾಸ್ ಆಗಿದ್ದು ಇದನ್ನು ಕೂಡ ಪೋವೆಲ್ ಸಿಕ್ಸರ್‌ಗಟ್ಟಿದರು. ಈ ಎಸೆತ ವಿವಾದಕ್ಕೆ ಎಡೆಮಾಡಿಕೊಟ್ಟಿತು. ಅಂಪೈರ್ ನೋಬಾಲ್ ಕೊಡದೇ ಇದ್ದರೂ ಡೆಲ್ಲಿ ಆಟಗಾರರು ಕುಳಿತಲ್ಲಿಂದಲೇ ನೋಬಾಲ್ ಸಿಗ್ನಲ್ ತೋರಿಸಿದರು. ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್ ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ಪೋವೆಲ್ ಮತ್ತು ಕುಲ್‍ದೀಪ್ ಯಾದವ್ ಅವರನ್ನು ಉದ್ದೇಶಿಸಿ ಬೌಂಡರಿ ಗೆರೆ ಬಳಿ ನಿಂತು ಪೆವಿಲಿಯನ್‍ಗೆ ಬನ್ನಿ ಎಂದು ಕರೆದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್
Meanwhile Chahal & Kuldeep 😂#RRvsDC #noball #RishabhPant pic.twitter.com/8cJmAl1nmz
— Cric kid (@ritvik5_) April 22, 2022
ಈ ವೇಳೆ ಕುಲ್‍ದೀಪ್ ಯಾದವ್ ಅಂಪೈರ್ ಜೊತೆ ನೋ ಬಾಲ್ ವಾಗ್ವಾದಕ್ಕೆ ಇಳಿದರು. ಈ ಸಂದರ್ಭ ಪಕ್ಕದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಚಹಲ್ ಬಂದು ಕುಲ್‍ದೀಪ್ ಯಾದವ್‍ರನ್ನು ಸಮಾಧಾನ ಪಡಿಸಲು ಮುಂದಾದರು. ಈ ವೇಳೆ ಕುಲ್‍ದೀಪ್ ಮತ್ತೆ ಅಂಪೈರ್ ಕಡೆ ಮಾತನಾಡಲು ಯತ್ನಿಸುತ್ತಿದ್ದಂತೆ, ಚಹಲ್, ಕುಲ್‍ದೀಪ್‍ರನ್ನು ಹೋಗು ಬ್ಯಾಟಿಂಗ್ ಮಾಡು ಎನ್ನುವಂತೆ ಕೈ ಹಿಡಿದು ತಳ್ಳಿದರು. ಇವರಿಬ್ಬರೂ ಕೂಡ ಟೀಂ ಇಂಡಿಯಾದಲ್ಲಿ ಜೊತೆಯಾಗಿ ಆಡುತ್ತಿದ್ದಾಗ ಉತ್ತಮ ಸ್ನೇಹಿತರಾಗಿದ್ದರು. ಹಾಗಾಗಿ ಈ ಕಿರಿಕ್ ನಡುವೆ ಇವರಿಬ್ಬರು ತಮಾಷೆಗಿಳಿದು ಎಲ್ಲರನ್ನೂ ನಗಿಸಿದ್ದಾರೆ.