ಮುಂಬೈ: ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ನಡುವಿನ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದ್ಯಾ? ಹೀಗೊಂದು ಪ್ರಶ್ನೆಯನ್ನು ಇಟ್ಟುಕೊಂಡು ಜನ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ.
Advertisement
ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ, 2020ರ ಡಿಸೆಂಬರ್ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್ಗೆ ಮುಂದಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಪ್ರಮುಖ ಕಾರಣ ಇವರಿಬ್ಬರು ಇನ್ಸ್ಟಾಗ್ರಾಮ್ನಲ್ಲಿ ಹಾಕಿಕೊಂಡಿರುವ ಪೋಸ್ಟ್. ಇದನ್ನೂ ಓದಿ: ನಾನು ರೊನಾಲ್ಡೊ ಆಡುವ ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಖರೀದಿಸುತ್ತೇನೆ: ಎಲೋನ್ ಮಸ್ಕ್
Advertisement
Advertisement
ಹೌದು. ಚಹಲ್ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದಾರೆ.
Advertisement
ಇದನ್ನು ಗಮನಿಸಿದ ಅಭಿಮಾನಿಗಳು ಇವರಿಬ್ಬರ ದಾಂಪತ್ಯ ಜೀವನ ಮುರಿದುಬಿದ್ದಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರೂ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿಮಾಡಿದೆ. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್?
ಇತ್ತ ಚಹಲ್ ಏಷ್ಯಾ ಕಪ್ ಟೂರ್ನಿಗಾಗಿ ಸಿದ್ಧತೆಯಲ್ಲಿದ್ದಾರೆ. ಏಷ್ಯಾಕಪ್ ಆಗಸ್ಟ್ 27 ರಿಂದ ಯುಎಇನಲ್ಲಿ ಆರಂಭವಾಗುತ್ತಿದ್ದು, ಆಗಸ್ಟ್ 28 ರಂದು ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವಾಡುತ್ತಿದೆ.