ಮುಂಬೈ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆವೃತ್ತಿಗೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡವು ನೂತನ ಮೆಂಟರ್ ಆಗಿ 2011ರ ಏಕದಿನ ವಿಶ್ವಕಪ್ ವಿನ್ನರ್ ಹಾಗೂ ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ (Zaheer Khan) ಅವರನ್ನ ನೇಮಕ ಮಾಡಿದೆ.
Zaheer, Lucknow ke dil mein aap bohot pehle se ho 🇮🇳💙 pic.twitter.com/S5S3YHUSX0
— Lucknow Super Giants (@LucknowIPL) August 28, 2024
Advertisement
2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡಕ್ಕೆ ಮೊದಲ ಎರಡು ಆವೃತ್ತಿಗಳಲ್ಲಿ ಗೌತಮ್ ಗಂಭೀರ್ ಮೆಂಟರ್ (Mentor) ಆಗಿದ್ದರು. ಆದ್ರೆ 2024ರ ಐಪಿಎಲ್‌ನಲ್ಲಿ ಗಂಭೀರ್ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡಕ್ಕೆ ಸೇರ್ಪಡೆಯಾದರು. ಅಂದಿನಿಂದ ಖಾಲಿ ಉಳಿದಿದ್ದ ಸ್ಥಾನಕ್ಕೆ ಈಗ ಫ್ರಾಂಚೈಸಿ ಜಹೀರ್ ಖಾನ್ ಅವರನ್ನ ನೇಮಕ ಮಾಡಿಕೊಂಡಿದೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಶಕೀಬ್ ಬ್ಯಾನ್ ಮಾಡಿ – ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ನೋಟಿಸ್
Advertisement
Advertisement
ಈ ಮಾಹಿತಿಯನ್ನು ಲಕ್ನೋ ಫ್ರಾಂಚೈಸಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಅಲ್ಲದೇ ಲಕ್ನೋ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಜಹೀರ್ ಖಾನ್‌ಗೆ ಎಲ್‌ಎಸ್‌ಜಿ ಮೆಂಟರ್ ಜರ್ಸಿ ಕೊಟ್ಟು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಲಕ್ನೋದಲ್ಲೇ ರಾಹುಲ್ ಉಳಿಸಿಕೊಳ್ಳಲು ಗೋಯೆಂಕಾ ಪ್ರಯತ್ನ
Advertisement
Blue suits you Zak 💙🥹 pic.twitter.com/hAJJWuwlmr
— Lucknow Super Giants (@LucknowIPL) August 28, 2024
ಸತತ 2 ಬಾರಿ ಪ್ಲೇ ಆಫ್ಸ್‌ಗೆ:
ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಎಲ್‌ಎಸ್‌ಜಿ ತಂಡ ಐಪಿಎಲ್ 2022-2023ರ ಎರಡೂ ಆವೃತ್ತಿಗಳಲ್ಲಿ ಸತತವಾಗಿ ಪ್ಲೇ ಆಫ್ಸ್ ತಲುಪಿದ ಸಾಧನೆ ಮಾಡಿತ್ತು. ಬಳಿಕ ಗಂಭೀರ್ ಕೆಕೆಆರ್ ತಂಡ ಸೇರಿಕೊಂಡರು. 2024ರಲ್ಲಿ ಲಕ್ನೋ ತಂಡ ಲೀಗ್ ಸುತ್ತಿನಲ್ಲೇ ಹೊರಬಿದ್ದಿತು. ಇದೀಗ ಹಳಿ ತಪ್ಪಿರುವ ಎಲ್‌ಎಸ್‌ಜಿ ತಂಡವನ್ನು ಮೇಲೆತ್ತುವ ಜವಾಬ್ದಾರಿ ಜಹೀರ್ ಖಾನ್ ಮೇಲಿದೆ.
ಜಹೀರ್ ಖಾನ್ 10 ಐಪಿಎಲ್ ಆವೃತ್ತಿಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರವಾಗಿ ಆಡಿದ್ದಾರೆ. ಅಲ್ಲದೇ ಮೆಂಟರ್ ಆಗಿ ನೇಮಕಗೊಂಡಿದ್ದಕ್ಕೆ ಜಹೀರ್ ಖಾನ್ ಸಹ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಸಿಸಿ ಮುಖ್ಯಸ್ಥರಾಗಿ ಜಯ್ ಶಾ ಅವಿರೋಧ ಆಯ್ಕೆ