ಬೆಂಗಳೂರು: ನನಗೆ ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶವಿಲ್ಲ. ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಸರಣಿ ಟ್ವೀಟ್ ಮಾಡುವ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ.
ನಿನ್ನೆ ಜಮೀರ್, ಬುರ್ಖಾ ಪದ್ಧತಿ ಇಲ್ಲದ ಕಾರಣವೇ ಭಾರತದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತಿವೆ ಅಂತ ಪರೋಕ್ಷವಾಗಿ ಹೇಳಿಕೆ ನೀಡಿ, ಯುವತಿಯರ ಸೌಂದರ್ಯ ರಕ್ಷಣೆಗೆ ಬುರ್ಖಾ, ಹಿಜಬ್ ಪದ್ಧತಿ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಲಾಗುತ್ತಿತ್ತು. ಪರಿಣಾಮ ಜಮೀರ್ ಅವರು ಟ್ವಿಟ್ಟರ್ ನಲ್ಲಿ 7 ಸರಣಿ ಟ್ವೀಟ್ ಮಾಡುವ ಮೂಲಕ ಕ್ಷಮೆಯನ್ನು ಕೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್
Advertisement
Advertisement
ಟ್ವೀಟ್ ನಲ್ಲಿ ಏನಿದೆ?
ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ-ಅತ್ಯಾಚಾರಗಳನ್ನು ಕಂಡಾಗ ಭಯ-ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಬ್ – ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ ಎಂದು ವಿವರಿಸಿದರು. ಈ ರೀತಿ ಹೇಳಿಕೆಗಳನ್ನ ಕೊಟ್ಟು ಯಾರ ಮನಸ್ಸನ್ನಾದರೂ ನೋಯಿಸುವ, ಇಲ್ಲವೇ ಅಗೌರವ ತೋರಿಸುವ ದುರುದ್ದೇಶದಿಂದ ಹೇಳಿದ್ದಲ್ಲ. ಹೆಣ್ಣು ಮಕ್ಕಳ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಮನವಿ ಮಾಡಿಕೊಂಡರು.
Advertisement
ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ. 3/7#HijabIsOurPride
— B Z Zameer Ahmed Khan (@BZZameerAhmedK) February 14, 2022
Advertisement
ಹಿಜಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ. ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ, ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣುಮಕ್ಕಳ ಬಗೆಗಿನ ಕಾಳಜಿ ಇದೆ ಎಂದು ಹೇಳಿದರು.
ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು ಎಂದರು.
ಹೌದು, ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು ಎಂದು ತಿಳಿಸಿದರು.
ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ. 7/7#HijabIsOurPride
— B Z Zameer Ahmed Khan (@BZZameerAhmedK) February 14, 2022
ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಕ್ಷಮೆ ಕೇಳಲ್ಲ ಎಂದಿದ್ರು!
ಇಂದು ಹುಬ್ಬಳ್ಳಿಯಲ್ಲಿ ಜಮೀರ್ ಅವರನ್ನು ಎಲ್ಲ ನಾಯಕರು ನಿಮ್ಮ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದಾಗ ಅವರು, ನಾನ್ ಹಿಜಬ್ ಬಗ್ಗೆ ಮಾತನಾಡುವವನೇ, ಯಾಕೆ ನಾನು ಕ್ಷಮೆ ಕೇಳಬೇಕು. ಕ್ಷಮೆ ಕೇಳುವಂತಹ ಹೇಳಿಕೆ ನಾನೇನು ನೀಡಿದ್ದೀನಿ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು – ಡಿಕೆಶಿಗೆ ಜಮೀರ್ ಟಾಂಗ್
ನಾನು ಹಿಜಬ್ ಹಾಕಬೇಕು ಅಂತ ಹೇಳಿದ್ದೆ, ಮಾಧ್ಯಮದವರು ಅದನ್ನು ತಿರುಚಿದ್ದಾರೆ. ಹೆಲ್ಮೇಟ್ ರೀತಿ ಹಿಜಬ್ ಹಾಕೋಬೇಕು, ಹೆಲ್ಮೇಟ್ ಹೇಗೆ ಸೇಫ್ಟಿ ಕೊಡುತ್ತೊ ಹಾಗೇ ಹಿಜಬ್ ಕೂಡಾ ನೀಡುತ್ತೆ ಎಂದಿದ್ದರು.
ರಾಜಕೀಯ ಗಣ್ಯರು ಹೇಳಿದ್ದೇನು?
ಹಿಜಬ್ ವಿವಾದದ ಬಗ್ಗೆ ಶಾಸಕ ಜಮೀರ್ ಅಹ್ಮದ್ ಕೊಟ್ಟಿರುವ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ. ಈ ಬಗ್ಗೆ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡುತ್ತೇವೆ. ಅವರು ಆ ಮಾತನ್ನು ವಾಪಸ್ ಪಡೆಯಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದರು.
ಗೃಹಸಚಿವ ಅರಗ ಜ್ಞಾನೇಂದ್ರ, ಇದೊಂದು ಕೆಟ್ಟ ಹೇಳಿಕೆ. ನಮ್ಮ ಹೆಣ್ಣು ಮಕ್ಕಳು ಪ್ಯಾಂಟ್, ಬಿಗಿ ಉಡುಪು ಹಾಕ್ತಾರೆ. ಹಾಗಂತ ಅವ್ರ ಮೇಲೆ ಅತ್ಯಾಚಾರ ಆಗಿದೆಯಾ? ಉಡುಗೆ ತೊಡೋದು ಹೆಣ್ಣು ಮಕ್ಕಳ ಸ್ವಾತಂತ್ರ್ಯ. ಮುಸ್ಲಿಂಮರು ಹಿಜಬ್, ಬುರ್ಖಾ ಹಾಕದೇ ಇದ್ರೆ ರೇಪ್ ಆಗುತ್ತೆ ಅನ್ನೋ ಮನಸ್ಥಿತಿ ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಮೀರ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು: ಡಿಕೆಶಿ
ಎಂಎಲ್‍ಸಿ ರವಿಕುಮಾರ್ ಅಂತೂ, ಜಮೀರ್ ಇನ್ನೂ ಯಾವ ಯುಗದಲ್ಲಿ ಇದ್ದಾರೆ. ಜಮೀರ್ ಮನುಷ್ಯರೇ ಅಲ್ಲ. ಕೂಡ್ಲೇ ಕ್ಷಮೆ ಕೇಳಬೇಕು. ಜಮೀರ್ ವಿರುದ್ಧ ಕ್ರಮ ಆಗ್ಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ತೇಜಸ್ವಿನಿ ರಮೇಶ್ ಈ ಕುರಿತು ಪ್ರತಿಕ್ರಿಯಿಸಿದ್ದು, ತಂದೆ, ತಾಯಿ, ಗಂಡನ ಎದುರಿಗೆ ಹಿಜಬ್ ಹಾಕ್ಬೇಕಾ..? ಜಮೀರ್ ಮುಸ್ಲಿಂ ರಾಷ್ಟ್ರಗಳಲ್ಲಿ ಹೋಗಿ ಮಾತಾಡಲಿ ಎಂದು ಗರಂ ಆಗಿದ್ದಾರೆ. ಭಾರತೀ ಶೆಟ್ಟಿ ಅವರು ಸಹ ಈ ಕುರಿತು ವಿರೋಧ ವ್ಯಕ್ತಪಡಿಸಿದ್ದು, ಜಮೀರ್ ಹೇಳಿಕೆ ಬಾಲೀಷ ಅಂತಾ ಆಕ್ರೋಶ ಹೊರಹಾಕ್ತಿದ್ದೇವೆ. ಜಮೀರ್ ಹೇಳಿಕೆ ಅಪ್ರಬುದ್ಧ ಎಂದು ಜೆಡಿಎಸ್ ಎಂಲ್‍ಸಿ ಶ್ರೀಕಂಠೇಗೌಡರು ಟೀಕಿಸಿದ್ದಾರೆ.