ಹುಬ್ಬಳ್ಳಿ: ಬಿಜೆಪಿ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ನೀಡಿರುವುದು ಸಾಬೀತು ಮಾಡಿದ್ರೆ, ನಾನು ನಾಳೆಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಬಿಜೆಪಿಯವರಿಗೆ ಸವಾಲ್ ಹಾಕಿದರು.
ಹುಬ್ಬಳ್ಳಿ (Hubballi) ಮಂಟರು ರಸ್ತೆಯ ಹೊಸ ಯಲ್ಲಾಪುರ ಓಣಿಯಲ್ಲಿ ಸ್ಲಂ ಬೋರ್ಡ್‌ನಿಂದ ನಿರ್ಮಾಣವಾದ ಮನೆಗಳ ವೀಕ್ಷಣೆ ಬಳಿಕ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ಸರ್ಕಾರದಲ್ಲಿ ಮನೆಗಳ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈ ಹಿಂದೆ ನಾವೇ ಮಂಜೂರು ಮಾಡಿರುವ ಮನೆ ನಿರ್ಮಾಣ ಮಾಡಲು 8 ವರ್ಷ ಬೇಕಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ಈಗಿನ ರಾಜಕೀಯದಲ್ಲಿ ಸಿದ್ಧಾಂತ ಎಂಬುದು ಉಳಿದಿಲ್ಲ: ದೇಶಪಾಂಡೆ ಬೇಸರ
ಮುಂದಿನ ತಿಂಗಳು ರಾಜ್ಯ ವ್ಯಾಪ್ತಿಯಲ್ಲಿ ಒಟ್ಟು 42 ಸಾವಿರ ಮನೆಗಳನ್ನು ನೀಡುತ್ತಿದ್ದೇವೆ. ಹುಬ್ಬಳ್ಳಿ ಒಂದಕ್ಕೆ ಒಂದು ಸಾವಿರಕ್ಕೂ ಅಧಿಕ ಮನೆ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ತಿಂಗಳ ಅಂತ್ಯದಲ್ಲಿ ಹುಬ್ಬಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡುತ್ತೇವೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ
ಸ್ಲಂ ಬೋರ್ಡ್‌ನಿಂದ ನಿರ್ಮಾಣವಾದ ಮನೆಗಳ ವೀಕ್ಷಿಸಿದ ಸಚಿವ ಜಮೀರ್ ಅಹ್ಮದ್ ಅವರಿಗೆ ಶಾಸಕ ಪ್ರಸಾದ್ ಅಬ್ಬಯ್ಯ, ಎನ್.ಹೆಚ್.ಕೋನರೆಡ್ಡಿ ಸಾಥ್ ನೀಡಿದರು.