– ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತ ಮನವಿ
ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್‌ಗೆ (Zameer Ahmed) ಹೊಸ ಸಂಕಷ್ಟ ಶುರುವಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ (Disproportionate Assets) ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತ (Lokayukta) ದೊಡ್ಡ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸುವ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ (Governer) ಲೋಕಾಯುಕ್ತ ಪೊಲೀಸರು ಮನವಿ ಮಾಡಿದ್ದಾರೆ.
ಈ ಸಂಬಂಧ ಲೋಕಭವನಕ್ಕೆ ಸಾವಿರಾರು ಪುಟಗಳ ದಾಖಲೆ ಸಹಿತ ಲೋಕಾಯುಕ್ತ ಪೊಲೀಸರು ಕೋರಿಕೆ ಸಲ್ಲಿಸಿದ್ದಾರೆ. ಜಮೀರ್ ಅಹ್ಮದ್ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಶಿರಾ ನಗರಸಭೆ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಹೈಡ್ರಾಮಾ; ಮಾಜಿ ಅಧ್ಯಕ್ಷೆ & ಸದಸ್ಯನ ನಡುವೆ ಮಾತಿನ ಚಕಮಕಿ
ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಯಾರೂ ಕೂಡಾ ಕಾನೂನಿಗಿಂತ ಮೇಲಲ್ಲ. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಡಲಿ ನೋಡೋಣ ಎಂದಿದ್ದಾರೆ. ಇದನ್ನೂ ಓದಿ: ಎನ್‌ಪಿಎಸ್‌ನಿಂದ ಹಳೆಯ ಪಿಂಚಣಿ ಯೋಜನೆ ಜಾರಿ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ – ಡಿಕೆಶಿ ಭರವಸೆ
ಏನಿದು ಕೇಸ್?
-2018ರಲ್ಲಿ ಐಎಂಎ ವಂಚನೆ ಪ್ರಕರಣದ ತನಿಖೆ ವೇಳೆ ಜಾರಿ ನಿರ್ದೇಶನಾಲಯ ಜಮೀರ್ ಅಹ್ಮದ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
-ದಾಳಿಯ ವೇಳೆ ಪತ್ತೆಯಾದ ಮಾಹಿತಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ತನಿಖೆ ನಡೆಸುವಂತೆ ಅಂದಿನ ಎಸಿಬಿಗೆ ಇಡಿ ಸೂಚಿಸಿತ್ತು.
-ಬಳಿಕ ಎಸಿಬಿ ರದ್ದಾದ ನಂತರ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡರು.
-ತನಿಖೆಯ ವೇಳೆ ಆದಾಯಕ್ಕಿಂತ ಸುಮಾರು 25 ಕೋಟಿ ರೂಪಾಯಿ ಮೌಲ್ಯದ ಹೆಚ್ಚುವರಿ ಆಸ್ತಿ ಹೊಂದಿರುವ ಕುರಿತು ಪುರಾವೆಗಳು ಲಭ್ಯವಾಗಿವೆ ಎಂದು ಲೋಕಾಯುಕ್ತ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.
-ಇದೀಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದರಿಂದ, ಪ್ರಕರಣ ಹೊಸ ಹಂತಕ್ಕೆ ಪ್ರವೇಶಿಸಿದೆ.
