ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿನ ಕಳೆದಂತೆ ಟಾಕ್ ಫೈಟ್ ಜೋರಾಗುತ್ತಿದೆ. ಅದರಲ್ಲೂ ಸಿದ್ದರಾಮಯ್ಯ (Siddaramaiah) ಹಾಗೂ ಶಿಷ್ಯ ಜಮೀರ್ ಅಹಮದ್ (Zameer Ahmed) ತಮ್ಮ ಮಾತೃ ಪಕ್ಷದ ವಿರುದ್ಧ ಏಕ ಕಾಲಕ್ಕೆ ಮುಗಿ ಬಿದ್ದಿದ್ದಾರೆ. ಸಿದ್ದರಾಮಯ್ಯ ಹಾಗೂ ಜಮೀರ್ ಟಾರ್ಗೆಟ್ ಜೆಡಿಎಸ್ ರಾಜ್ಯ ರಾಜಕಾರಣದಲ್ಲಿ ಹೊಸ ರಾಜಕೀಯ ಸಮರದ ಮುನ್ಸೂಚನೆ ನೀಡತೊಡಗಿದೆ.
Advertisement
ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ವರ್ಸಸ್ ಕುಮಾರಸ್ವಾಮಿ (H.D Kumaraswamy) ಫೈಟ್ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ಬಾರಿ ಜೆಡಿಎಸ್ (JDS) ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಕೈ ಸುಟ್ಟುಕೊಂಡಿದ್ದರು. ಆದರೆ ಇಷ್ಟು ಸಮಯ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದ್ದ ಸಿದ್ದರಾಮಯ್ಯ ಈಗ ವಾಗ್ದಾಳಿ ಆರಂಭಿಸಿದ್ದಾರೆ. ಕಳೆದ ಬಾರಿ ಅಪ್ಪನ ಆಣೆ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದ ಸಿದ್ದರಾಮಯ್ಯ ಈ ಬಾರಿ ಜೆಡಿಎಸ್ ನಾಯಕರು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ ಎನ್ನುವ ಮೂಲಕ ಕುಮಾರಸ್ವಾಮಿ ಅವರಿಗೆ ಪಂಥಾಹ್ವಾನ ನೀಡಿದ್ದಾರೆ. ಆ ಮೂಲಕ ಈ ಬಾರಿಯು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮತ್ತಷ್ಟು ಟಾಕ್ ಫೈಟ್‍ಗೆ ಮುಹೂರ್ತ ಫಿಕ್ಸ್ ಆದಂತೆ ಕಾಣುತ್ತಿದೆ. ಇದನ್ನೂ ಓದಿ: ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ
Advertisement
Advertisement
ಕೆಲವು ಸಮಯ ಕುಮಾರಸ್ವಾಮಿ ವರ್ಸಸ್ ಜಮೀರ್ ಟಾಕ್ ಫೈಟ್ ರಾಜ್ಯ ರಾಜಕಾರಣದಲ್ಲಿ ಜೋರಾಗಿತ್ತು. ಈಗ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಶಾಸಕ ಜಮೀರ್ ಅಹಮದ್ ಕೂಡ ವಾಗ್ದಾಳಿ ಆರಂಭಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಹಳೆ ದೋಸ್ತಿ ವಿರುದ್ಧ ತೊಡೆ ತಟ್ಟಿದ್ದಾರೆ. ಕಳೆದ ಬಾರಿಯ ಅನುಭವನ ನಂತರವೂ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಬೇರೆಯದೆ ಲೆಕ್ಕಾಚಾರ ಇಟ್ಟುಕೊಂಡು ಎನ್ನುವ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಸಿದ್ದು ಆಡಳಿತದಲ್ಲಿ 18 ಹಿಂದೂಗಳ ಕೊಲೆಯಾಗಿದೆ: ಸುನಿಲ್ ಕುಮಾರ್
Advertisement
ಕಳೆದ ಬಾರಿ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್, ಜೆಡಿಎಸ್ ಜಟಾಪಟಿಯಲ್ಲಿ ಕಾಂಗ್ರೆಸ್‍ಗೆ ಹಿನ್ನಡೆ ಆಗಿತ್ತು. ಸಿದ್ದರಾಮಯ್ಯ, ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ನಡೆಸಿದ ವಾಗ್ದಾಳಿ ಬೇರೆಯದೆ ರೂಪ ಪಡೆದು ಒಕ್ಕಲಿಗ ಸಮುದಾಯ ಸಿದ್ದರಾಮಯ್ಯ ವಿರುದ್ಧ ತಿರುಗಿ ಬೀಳಲು ಕಾರಣವಾಗಿತ್ತು. ಈ ಬಾರಿ ಏನಾಗಬಹುದು ಸಿದ್ದರಾಮಯ್ಯ ಹಾಗೂ ಜಮೀರ್ ಲೆಕ್ಕಾಚಾರ ಏನು ಅನ್ನೋದೆ ಸದ್ಯದ ಕುತೂಹಲವಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k