ನವದೆಹಲಿ: ಇಡಿ ದಾಳಿ ನಡೆದು ಎರಡು ತಿಂಗಳ ಬಳಿಕ ದೆಹಲಿಯ ಲೋಕನಾಯಕ್ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿಚಾರಣೆಗೆ ಒಳಪಟ್ಟರು. ದೂರವಾಣಿ ಮೂಲಕ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆ ಇಂದು ಅವರು ವಿಚಾರಣೆ ಹಾಜರಾದರು.
ವಿಚಾರಣೆಯಲ್ಲಿ ಜಮೀರ್ ಅಹ್ಮದ್ ವ್ಯವಹಾರಗಳ ಬಗ್ಗೆ ಇಡಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಭೂಮಿ ಖರೀದಿ, ಮನೆ ನಿರ್ಮಾಣ ಮತ್ತು ಸಾರಿಗೆ ವ್ಯವಹಾರಗಳ ಹೆಚ್ಚುವರಿ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗ್ತಿದೆ: ಜಮೀರ್ ಅಹ್ಮದ್ ಖಾನ್
Advertisement
Advertisement
ಹದಿನೈದು ದಿನಗಳ ಹಿಂದಷ್ಟೇ ಜಮೀರ್ ಅಹ್ಮದ್ ಇಡಿ ಅಧಿಕಾರಿಗಳಿಗೆ ದಾಖಲೆಗಳನ್ನು ಸಲ್ಲಿಸಿದ್ದರು. ಅದಕ್ಕೂ ಮುನ್ನ ಬೆಂಗಳೂರಿನಲ್ಲಿ ನಡೆದ ದಾಳಿಯ ವೇಳೆ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸೃಷ್ಟಿಯಾದ ಕೆಲವು ಗೊಂದಲಗಳಿಗೆ ಸ್ಪಷ್ಟನೆ ಕೇಳಿದ್ದರು. ಇದನ್ನೂ ಓದಿ: ದೊಡ್ಡ ದೊಡ್ಡ ರಾಜಕಾರಣಿಗಳು ದೂರು ಕೊಟ್ಟಿರೋ ಅನುಮಾನ ಇದೆ: ಜಮೀರ್ ಬಾಂಬ್
Advertisement
ವಿಚಾರಣೆ ಬಳಿಕ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಐಎಂಎ ಪ್ರಕರಣಕ್ಕೂ ಇವತ್ತಿನ ವಿಚಾರಣೆಗೂ ಸಂಬಂಧ ಇಲ್ಲ. ಮನೆ ಮೇಲೆ ದಾಳಿ ಬಗೆಗೆ ಕೆಲವು ಸ್ಪಷ್ಟನೆಗಳನ್ನು ಕೇಳಿದ್ದರು. ತನಿಖಾಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಿದ್ದೇನೆ. ಅವಶ್ಯವಿದ್ದರೆ ಮತ್ತೆ ವಿಚಾರಣೆಗೆ ಕರೆಯುವುದಾಗೆ ಹೇಳಿದ್ದಾರೆ. ಇಡಿ ಅಧಿಕಾರಿಗಳು ನಡೆಸಿದ ವಿಚಾರಣೆ ಕುರಿತು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.
Advertisement
ಅಗಸ್ಟ್ 5ರಂದು ಬೆಂಗಳೂರಿನಲ್ಲಿರುವ ಜಮೀರ್ ಅಹ್ಮದ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಐಎಂಎ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ, ಅಕ್ರಮ ಹಣ ವರ್ಗಾವಣೆ ಅನುಮಾನದ ಮೇಲೆ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಿತ್ತು.