DharwadDistrictsKarnatakaLatest

ರೇವಣ್ಣ DCM ಆಗ್ತಾನೆಂದು ಬಿಎಸ್‍ವೈಗೆ ಅಧಿಕಾರ ಬಿಟ್ಟು ಕೊಡಲಿಲ್ಲ, ನನ್ನ ಬಳಿ ವೀಡಿಯೋ ದಾಖಲೆ ಇದೆ: ಜಮೀರ್

– ಎಚ್‍ಡಿಕೆ ಯಡಿಯೂರಪ್ಪನರವರಿಗೂ ಮೋಸ ಮಾಡಿದ್ದಾರೆ
– ಅಲ್ಪಸಂಖ್ಯಾತರಿಗೆ ಏನೂ ನೀಡಲಿಲ್ಲ, ಅದಕ್ಕೆ ನಾನು ಜೆಡಿಎಸ್ ಬಿಟ್ಟು ಬಂದಿದ್ದು

ಹುಬ್ಬಳ್ಳಿ : ಹೆಚ್.ಡಿ.ರೇವಣ್ಣ ಎಲ್ಲಿ ಉಪ ಮುಖ್ಯಮಂತ್ರಿ ಆಗುತ್ತಾನೆಂದು ಯಡಿಯೂರಪ್ಪನವರಿಗೆ ಅಧಿಕಾರ ಬಿಟ್ಟು ಕೊಡಲಿಲ್ಲ. ಇದರ ಬಗ್ಗೆ ನನ್ನ ಬಳಿ ವೀಡಿಯೋ ದಾಖಲೆ ಇದೆ ಎಂದು ಕುಮಾರಸ್ವಾಮಿ ವಿರುದ್ಧವಾಗಿ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಪರ್ ಶರೀಫರನ್ನು ರಾಜಕೀಯದಲ್ಲಿ ಮೇಲೆಳದಂತೆ ಮಾಡಿದ್ದು ಕುಮಾರಸ್ವಾಮಿ. ಗೆಲ್ಲುವ ಸಮಯದಲ್ಲಿ ಕುಮಾರಸ್ವಾಮಿಗೆ ಅಲ್ಪಸಂಖ್ಯಾತರ ನೆನಪು ಏಕೆ ಬರುವುದಿಲ್ಲ. ಕೇವಲ ಅಲ್ಪಸಂಖ್ಯಾತರಿಗೆ ಅಷ್ಟೇ ಅಲ್ಲ, ಯಡಿಯೂರಪ್ಪನರವರಿಗೂ ಮೋಸ ಮಾಡಿದ್ದಾರೆ. ಯಡಿಯೂರಪ್ಪನವರಿಗೆ ಅಧಿಕಾರ ಕೊಡಿ ಎಂದು ನಾನು ಕುಮಾರಸ್ವಾಮಿಗೆ ಹೇಳಿದ್ದೇನು. ಹೆಚ್.ಡಿ.ರೇವಣ್ಣ ಎಲ್ಲಿ ಉಪ ಮುಖ್ಯಮಂತ್ರಿ ಆಗುತ್ತಾನೆಂದು ಯಡಿಯೂರಪ್ಪನವರಿಗೆ ಅಧಿಕಾರ ಬಿಟ್ಟು ಕೊಡಲಿಲ್ಲ. ಇದರ ಬಗ್ಗೆ ನನ್ನ ಬಳಿ ವೀಡಿಯೋ ದಾಖಲೆ ಇದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮಿಂದ ಬೆಳೆದಿರೋದು ನಾವು – ಕಣ್ಣೀರು ಹಾಕಿದ ಹೆಚ್‍ಡಿಕೆ

ಕುಮಾರಸ್ವಾಮಿ ಸ್ವಂತ ಸಹೋದರನ ಏಳಿಗೆಯನ್ನ ಸಹಿಸಿಕೊಳ್ಳುವುದಿಲ್ಲ, ನಮ್ಮ ಏಳಿಗೆಯನ್ನ ಅವರು ಸಹಿಸಿಕೊಳ್ಳುವುದು ದೂರದ ಮಾತು. ಸೋಲುವ ಸಮಯದಲ್ಲಿ ಕುರಿ ಬಲಿ ಕೊಟ್ಟ ಹಾಗೆ, ಅಲ್ಪಸಂಖ್ಯಾತರನ್ನ ಬಲಿ ಕೋಡುತ್ತಾರೆ. ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಒಳ್ಳೆಯ ಯೋಜನೆಗಳನ್ನ ನೀಡಿದ್ದಾರೆ, ಹಲವು ಭಾಗ್ಯಗಳನ್ನ ನೀಡಿದ್ದಾರೆ. ಕುಮಾರಸ್ವಾಮಿ ಅಲ್ಪಸಂಖ್ಯಾತರಿಗೆ ಏನೂ ನೀಡಲಿಲ್ಲ, ಅದಕ್ಕೆ ನಾನು ಜೆಡಿಎಸ್ ಬಿಟ್ಟು ಬಂದಿದ್ದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೈಲಾಗದವನು ಮೈ ಪರಚಿಕೊಂಡ ಹಾಗೆ, ಜಮೀರ್ ಸ್ಥಿತಿ: ಹೆಚ್‍ಡಿಕೆ ಲೇವಡಿ 

Leave a Reply

Your email address will not be published. Required fields are marked *

Back to top button