ಬೆಂಗಳೂರು: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಇಲ್ಲಿ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.
ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ ಎಂಬ ಆದೇಶ ಬೆನ್ನಲ್ಲೇ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನಕ್ಕೆ ಶಾಸಕ ಜಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement
Advertisement
ಈ ವೇಳೆ ಮಾತನಾಡಿದ ಅವರು, ಮೈದಾನದಲ್ಲಿ ಹೇಗೆ ಆಚರಣೆ ಮಾಡ್ಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ಬಂದಿದ್ದೇನೆ. 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇನ್ಮುಂದೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಇಲ್ಲಿ ನಡೆಯುತ್ತದೆ. ಆದರೆ ಯಾವುದೇ ಧಾರ್ಮಿಕ ಹಬ್ಬಗಳಿಗೆ ಇಲ್ಲಿ ಅವಕಾಶವಿಲ್ಲ. ಎಷ್ಟು ಜನ ಬೇಕಾದ್ರೂ ಸೇರಲಿ ಜತೆಯಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
Advertisement
ಇತ್ತೀಚೆಗಷ್ಟೇ ಈದ್ಗಾ ವಿವಾದದ ಬಗ್ಗೆ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು. ಇದನ್ನೂ ಓದಿ: ಫಾಝಿಲ್ ಸ್ಮರಣಾರ್ಥ ರಕ್ತದಾನ ಶಿಬಿರ – ಜಿಲ್ಲೆಯ 4 ಕಡೆ ಬ್ಲಡ್ ಡೋನೇಟ್
Advertisement
ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಅವರು, ಈ ಹಿಂದೆ ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚನೆ ನೀಡಿತ್ತು. ವರ್ಕ್ಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಕಂದಾಯ ಇಲಾಖೆ ಬಳಿ ವ್ಯವಹರಿಸಬೇಕು ಎಂದು ತಿಳಿಸಿದ್ದರು. ಇದನ್ನೂ ಓದಿ: ಯುಪಿಯಲ್ಲಿ ಮತ್ತೆ ಜೆಸಿಬಿ ಘರ್ಜನೆ – ಬಿಜೆಪಿ ನಾಯಕನ ಅಕ್ರಮ ಕಟ್ಟಡ ನೆಲಸಮ