-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ
– ರಾಜ್ಯದಲ್ಲೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಇದೆ ಎಂದ ಸಚಿವ
ವಿಜಯಪುರ: ವಕ್ಫ್ ಆಸ್ತಿ (Waqf Property) ದೇವರ ಆಸ್ತಿ, ಅದರ ಕಬಳಿಕೆ ಅಥವಾ ಹಗರಣ ಆಗಬಾರದು, ರಕ್ಷಿಸುವ ಕೆಲಸವಾಗಬೇಕು. ಸದ್ಯ ರಾಜ್ಯದಲ್ಲಿರುವ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. ಆದ್ದರಿಂದ ಪ್ರತಿಯೊಬ್ಬರೂ ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಕರೆ ನೀಡಿದರು.
Advertisement
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ್ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ 10 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ಸೋಮವಾರ ವಿಜಯಪುರದಲ್ಲಿ 11ನೇ ಅದಾಲತ್ ನಡೆಯಿತು. ಕಳೆದ 10-15 ವರ್ಷಗಳಿಂದ ಬಾಕಿ ಉಳಿದ ವಕ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ 727 ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ವಿನೇಶ್ ಫೋಗಟ್‌ಗೆ ಆರಂಭಿಕ ಮುನ್ನಡೆ – ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ
Advertisement
Advertisement
ಅದಾಲತ್‍ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ 17 ಅರ್ಜಿಗಳು, ಖಬರಸ್ಥಾನ (ಸ್ಮಶಾನ)ಕ್ಕೆ ಸಂಬಂಧಿಸಿದ್ದು, ಖಾತೆ ಬದಲಾವಣೆಯ 81 ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ 25 ಅರ್ಜಿಗಳು ಸೇರಿದಂತೆ ಒಟ್ಟು 330 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ಒದಗಿಸಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?
Advertisement
ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿದೆ. ವಕ್ಫ್ ಆಸ್ತಿಯ ಸದ್ಭಳಕೆ ಮಾಡಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ವಕ್ಫ್ ಅನುದಾನ ಮರಳಿ ಪಡೆಯಲಾಗಿದೆ
ಹಣಕಾಸು ಇಲಾಖೆಗೆ ಮರಳಿ ಹೋದ ವಕ್ಫ್ ಅನುದಾನವನ್ನು ನಾನು ಸಚಿವನಾದ ಮೇಲೆ ಮತ್ತೆ ಮರಳಿ ಪಡೆಯಲಾಗಿದೆ. ಯಾವುದೇ ಸಮಾಜದ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅನುದಾನ ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ 15 ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿಂದ ಪಿಯು ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅತಿ ಹೆಚ್ಚು ಶಿಕ್ಷಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ಪುನ ಒದಗಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಮಾದರಿಯಾದ ಹಜ್ ಭವನ ಕರ್ನಾಟಕದಲ್ಲಿ ನಿರ್ಮಿಸಲಾಗಿದೆ. ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 1,300 ವಿದ್ಯಾರ್ಥಿಗಳಿಗೆ ನೆರವು ಒದಗಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗಕ್ಕಾಗಿ ನೆರವು ಒದಗಿಸಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತಿದೆ. ಮದರಸಾಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಹಜ್ ಭವನದಲ್ಲಿ 400 ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಸಿಂದಗಿ ಶಾಸಕ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅನ್ವರಬಾಶಾ ಅವರು ಮಾತನಾಡಿದರು. ಮೌಲಾನಾ ತನ್ವೀರ ಪೀರಾ ಹಾಸ್ಮೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್