ಬೆಂಗಳೂರು: ಚಂದನವನದ ಹೆಸರಾಂತ ನಿರ್ದೇಶಕ ಜಯತೀರ್ಥ ನಿರ್ದೇಶನದ ‘ಬನಾರಸ್’ ಸ್ಯಾಂಡಲ್‍ವುಡ್ ಅಂಗಳದಲ್ಲಿ ಸೆಟ್ಟೇರಿದ ದಿನದಿಂದ ಸಖತ್ ಟಾಕ್ ಕ್ರಿಯೇಟ್ ಮಾಡಿದೆ.
ಹಲವಾರು ವಿಶೇಷತೆ ಒಳಗೊಂಡಿರುವ ಈ ಚಿತ್ರದಲ್ಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಸ್ಯಾಂಡಲ್‍ವುಡ್ ಅಂಗಳಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಲವರ್ ಬಾಯ್ ಆಗಿ ಮಿಂಚಲಿರೋ ಝೈದ್ ಖಾನ್ ಜೊತೆ ಕರಾವಳಿ ಬೆಡಗಿ ಸೊನಲ್ ಮೊಂಥೆರೋ ತೆರೆ ಹಂಚಿಕೊಂಡಿದ್ದಾರೆ.
ಬಿಡುಗಡೆಯ ಆಸುಪಾಸಿನಲ್ಲಿರುವ ಸಿನಿಮಾ ಸಖತ್ ಸುದ್ದಿಯಲ್ಲಿದ್ದು, ಸಂಭ್ರಮದಲ್ಲಿದೆ. ಹೊಸ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಇದಕ್ಕೆ ಕಾರಣ ‘ಬನಾರಸ್’ ಚಿತ್ರದ ಆಡಿಯೋ ರೈಟ್ಸ್. ಹೌದು, ‘ಬನಾರಸ್’ ಚಿತ್ರದ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟವಾಗಿರೋದೆ ಈ ಸಂಭ್ರಮಕ್ಕೆ ಕಾರಣವಾಗಿದೆ. ದೇಶದ ಅತ್ಯುನ್ನತ ಆಡಿಯೋ ಕಂಪನಿ ಲಹರಿ ಸಂಸ್ಥೆ ಹಾಗೂ ಟಿ-ಸೀರೀಸ್ ಜಂಟಿಯಾಗಿ ಚಿತ್ರದ ಆಡಿಯೋ ರೈಟ್ಸ್ ಬರೋಬ್ಬರಿ 3.5 ಕೋಟಿ ರೂ. ದಾಖಲೆ ಮೊತ್ತ ಕೊಟ್ಟು ಖರೀದಿಸಿದೆ. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್ನಲ್ಲಿರುವ ಹೇಮ ಮಾಲಿನಿ, ಧರ್ಮೇಂದ್ರ
ಭಾರೀ ಮೊತ್ತಕ್ಕೆ ಆಡಿಯೋ ರೈಟ್ಸ್ ಸೇಲಾಗಿದೆ. ಈ ವಿಷಯ ಒಂದು ಕಡೆಯಾದ್ರೆ, ಯುವ ನಟನೊಬ್ಬ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಿನಿಮಾವೊಂದರ ಆಡಿಯೋ ರೈಟ್ಸ್ ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿದ್ದು, ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲು ಅನ್ನೋದು ವಿಶೇಷ ಸಂಗತಿಯಾಗಿದೆ.
ಚಿತ್ರತಂಡ ಈ ಖುಷಿಯ ಸಂಭ್ರಮದಲ್ಲಿದ್ದು, ಚಿತ್ರ ಬಿಡುಗಡೆಗೂ ತಯಾರಿ ನಡೆಸುತ್ತಿದೆ. ‘ಬನಾರಸ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ವಿಭಿನ್ನ ಹಾಗೂ ನವಿರಾದ ಪ್ರೇಮಕಥೆ ಚಿತ್ರದಲ್ಲಿದೆ. ಚಿತ್ರದಲ್ಲಿ ಝೈದ್ ಖಾನ್, ಸೊನೆಲ್ ಮೊಂಥೆರೋ ಜೋಡಿ ಲವ್ ಬಡ್ರ್ಸ್ ಆಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಚಿತ್ರದ ಚಿತ್ರೀಕರಣ ಬೆಂಗಳೂರು ಒಳಗೊಂಡಂತೆ ಬಹುತೇಕ ಕಾಶಿಯಲ್ಲೇ ನಡೆದಿರೋದು ಚಿತ್ರದ ಮತ್ತೊಂದು ವಿಶೇಷವಾಗಿದೆ.
ಚಿತ್ರದಲ್ಲಿ ದೇವರಾಜ್, ಅಚ್ಯುತ್ ಕುಮಾರ್, ಸುಜಯ್ ಶಾಸ್ತ್ರಿ ಒಳಗೊಂಡಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ‘ಬನಾರಸ್’ ಸಿನಿಮಾ ಮೂಡಿ ಬಂದಿದ್ದು, ಪ್ರೇಮಕಥೆ ಒಳಗೊಂಡ ಈ ಚಿತ್ರದಲ್ಲಿ ಸಂಗೀತಕ್ಕೆ ಹೆಚ್ಚು ಪ್ರಾಶಸ್ತ್ಯವನ್ನು ನೀಡಲಾಗಿದೆ. ಇದನ್ನೂ ಓದಿ: ಗೋವು ಕಳ್ಳರನ್ನು ಬಂಧಿಸಿ – ಶಿವಮೊಗ್ಗದ್ದಲ್ಲಿ ವಿಎಚ್‍ಪಿ, ಭಜರಂಗ ದಳ ಪ್ರತಿಭಟನೆ
ಅದ್ವೈತ್ ಗುರುಮೂರ್ತಿ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಎನ್.ಕೆ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ವೈ.ಬಿ.ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದು, ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ.