ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಇವತ್ತು ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಭೇಟಿ ಕೊಟ್ಟಿದ್ದರು. ಬೆಂಗಳೂರಿನಲ್ಲಿರುವ ಜಯಮಹಲ್ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಇಬ್ರಾಹಿಂ ಜೊತೆ ಮಹತ್ವದ ಮಾತುಕತೆ ನಡೆಸಿದರು.
ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದು, ಇಬ್ಬರ ಮಾತುಕತೆ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್‌ಗೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ್ದರೂ ಕಾಂಗ್ರೆಸ್ ತೊರೆಯದಂತೆ ಜಮೀರ್ ಮನವೊಲಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಹಿಜಬ್ ವಿಚಾರವಾಗಿಯೂ ಮುಸ್ಲಿಂ ಮುಖಂಡರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದು ಮಹತ್ವದ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ. ಇದನ್ನೂ ಓದಿ: ಬಾಲಕಿ ಮೇಲೆ ಗ್ಯಾಂಗ್ ರೇಪ್- 24 ಗಂಟೆಯಲ್ಲಿ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ
Advertisement
Advertisement
ಸಿ.ಎಂ.ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದರೂ ಸಹ ಕಾಂಗ್ರೆಸ್‌ನಿಂದ ರಾಜೀನಾಮೆ ಅಂಗೀಕಾರದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಮೊನ್ನೆಯಷ್ಟೇ ವಿಧಾನಸೌಧದ ಕಾರಿಡಾರ್‌ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೋಗುತ್ತಿದ್ದಾಗ ಇಬ್ರಾಹಿಂ ಎದುರು ಸಿಕ್ಕಾಗ ಸುಮ್ನೆ ಅರ್ಜೆಂಟ್ ಮಾಡ್ಬೇಡ ಸುಮ್ಮನಿರು ಎಂದು ಹೇಳಿದ್ದರು. ಇದನ್ನೂ ಓದಿ: 60 ಸೆಕೆಂಡ್‍ನಲ್ಲಿ ರಾಯಲ್ ಎನ್‍ಫೀಲ್ಡ್ ಕದಿಯೋದನ್ನು ತೋರಿಸಿಕೊಟ್ಟ ಖತರ್ನಾಕ್ ಕಳ್ಳ..!
Advertisement
ಇಬ್ರಾಹಿಂ ನಿನ್ನ ಜೊತೆ ಮಾತಾಡ್ತೀನಿ ಸುಮ್ನೆ ಇರಪ್ಪಾ ಅಂತಾ ಸಿದ್ದರಾಮಯ್ಯ ನಕ್ಕಿದ್ರು. ಆಗ ಸಿ.ಎಂ.ಇಬ್ರಾಹಿಂ ಕೂಡ ನಗು ನಗುತ್ತಾ ಹೋಗಿ ಬನ್ನಿ ಅಂತೇಳಿದ್ರು. ಈ ನಡುವೆ ಇವತ್ತು ಸಿದ್ದರಾಮಯ್ಯ ಆಪ್ತ ಜಮೀರ್ ಇಬ್ರಾಹಿಂ ಮನೆಗೆ ಭೇಟಿ ನೀಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.