– ಕೋಗಿಲು ಲೇಔಟ್ ಅಕ್ರಮ ಮನೆ ತೆರವು ವಿಚಾರದಲ್ಲಿ ಪಾಕ್ ಎಂಟ್ರಿಗೆ ಸಚಿವ ಕಿಡಿ
ಬೆಂಗಳೂರು: ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed) ಸ್ಪಷ್ಟನೆ ನೀಡಿದರು.
ಕೋಗಿಲು ಲೇಔಟ್ (Kogilu Layout) ಅಕ್ರಮ ಮನೆ ತೆರವು ವಿಚಾರಕ್ಕೆ ಪಾಕಿಸ್ತಾನ ಎಂಟ್ರಿಗೆ ಸಚಿವ ಜಮೀರ್ ಕಿಡಿಕಾರಿದ್ದಾರೆ. ಪಾಕಿಸ್ತಾನಕ್ಕೂ ಈ ವಿಷಯಕ್ಕೂ ಏನು ಸಂಬಂಧ? ಪಾಕಿಸ್ತಾನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಬಗ್ಗೆ ಹೇಳೋಕೆ ಅರ‍್ಯಾರು? ನಮ್ಮ ದೇಶದಲ್ಲಿ ನಾವು ಇದ್ದೇವೆ. ಮುಸ್ಲಿಮರನ್ನ ನೋಡಿಕೊಳ್ಳೋಕೆ, ಅವರು ಯಾರು ನಮಗೆ ಹೇಳೋಕೆ. ಮೊದಲು ಪಾಕಿಸ್ತಾನ ಅವರು ಅವರ ದೇಶ ನೋಡಿಕೊಳ್ಳಲಿ. ಪಾಕಿಸ್ತಾನದಲ್ಲಿ ಬಡತನ ಇದೆ. ಮೊದಲು ಅದನ್ನ ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೈಯ್ಯಪ್ಪನಹಳ್ಳಿಯಲ್ಲಿ ಪುನರ್ವಸತಿ: ಸಿಎಂ ಸಿದ್ದರಾಮಯ್ಯ ಘೋಷಣೆ – ಕರ್ನಾಟಕದಲ್ಲಿ ಕೇರಳ ರೂಲ್ ಎಂದು ಬಿಜೆಪಿ ಆಕ್ರೋಶ
ಅಕ್ರಮ ಮನೆಗಳನ್ನ ಸಕ್ರಮ ಮಾಡ್ತಿರೋ ವಿಚಾರ ಕುರಿತು ಮಾತನಾಡಿ, ನಾಳೆ ನಾನು ಸುದ್ದಿಗೋಷ್ಠಿ ಮಾಡಿ ಸಂಪೂರ್ಣ ಮಾಹಿತಿ ಕೊಡ್ತೀನಿ. ಎಲ್ಲಾ ವಿವರ ಕೊಡ್ತೀನಿ. ಡಾಕ್ಯುಮೆಂಟ್ ಪರಿಶೀಲನೆ ಮಾಡಿ ಅಂತ ಸಿಎಂ, ಡಿಸಿಎಂ ಅವರು ಸೂಚನೆ ನೀಡಿದ್ದಾರೆ. ನಮ್ಮ ಕರ್ನಾಟಕದವರು ಇದ್ದರೆ ಮಾತ್ರ ಮನೆ ಕೊಡೋದಕ್ಕೆ ತೀರ್ಮಾನ ಮಾಡಿದ್ದೇವೆ. ಆಚೆಯಿಂದ ಬಂದವರಿಗೆ ನಾವು ಮನೆ ಕೊಡೊಲ್ಲ ಎಂದು ತಿಳಿಸಿದರು.
ವೇಣುಗೋಪಾಲ್ ಹಸ್ತಕ್ಷೇಪ ಏನೂ ಇಲ್ಲ. ವೇಣುಗೋಪಾಲ್ ಅವರು ಟಿವಿಯಲ್ಲಿ ಹೀಗೆ ಬಂದಿದೆ ನೋಡಿ ಅಂತ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮದು ರಾಷ್ಟ್ರೀಯ ಪಕ್ಷ. ಅವರು ನಮ್ಮ ನಾಯಕರು. ಕರ್ನಾಟಕದಲ್ಲಿ ಹೀಗೆ ಸುದ್ದಿ ನಡೆಯುತ್ತಿದೆ ಅಂತ ಹೇಳಿದ್ದಾರೆ. ಸಿಎಂ ನೋಡಿದ್ದಾರೆ ಅಷ್ಟೆ. ಸಿಎಂ ಅವರು ಮೀಟಿಂಗ್ ಮಾಡಿ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ದಾಖಲಾತಿ ನೋಡಿ ಯಾರಿಗೂ ಅನ್ಯಾಯವಾಗಬಾರದು. ಸ್ಥಳೀಯರಿಗೆ ಮಾತ್ರ ಮನೆ ಕೊಡಿ ಅಂತ ತೀರ್ಮಾನ ಆಗಿದೆ. ಆಧಾರ್, ರೇಷನ್ ಕಾರ್ಡ್,BPL ಕಾರ್ಡ್ ಇದ್ದವರಿಗೆ ಮಾತ್ರ ಮನೆ ಕೊಡ್ತೀವಿ. ಅದು ಬಿಟ್ಟು ಬೇರೆ ಅವರಿಗೆ ಕೊಡಲು ಸಾಧ್ಯವಿಲ್ಲ. ಅಧಿಕೃತ ದಾಖಲಾತಿ ಇದ್ದರೆ ಮಾತ್ರ ಮನೆಗಳನ್ನು ಕೊಡಲು ಸಾಧ್ಯ. ಬಾಂಗ್ಲಾದೇಶದಿಂದ ಬಂದೋರಿಗೆ ಮನೆ ಕೊಡಲು ಸಾಧ್ಯವಿಲ್ಲ. ನನಗೆ ಇರೋ ಮಾಹಿತಿ ಪ್ರಕಾರ ಬಾಂಗ್ಲಾದೇಶದವರು ಯಾರು ಇಲ್ಲ. 185 ಜನರಲ್ಲಿ 20 ಜನ ಬೇರೆ ಜಿಲ್ಲೆಯವರು ಇದ್ದಾರೆ. ಅವರು ಕರ್ನಾಟಕದವರೇ. ಯಾದಗಿರಿ, ಕಲಬುರಗಿ, ಬೀದರ್ ಅವರೇ. ಜಿಬಿಎ ಅಧಿಕಾರಿಗಳು ಪಟ್ಟಿ ರೆಡಿ ಮಾಡೋಕೆ ಸಿಎಂ, ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಅವರು ಪಟ್ಟಿ ರೆಡಿ ಮಾಡ್ತಾರೆ ಎಂದರು. ಇದನ್ನೂ ಓದಿ: ಸಂತ್ರಸ್ತರ ಅಹವಾಲು ಆಲಿಸಿದ ಡಿಕೆಶಿ – ಹೈಕಮಾಂಡ್ ಒತ್ತಡಕ್ಕೆ ಮಣೀತಾ ʻಕೈʼ ಸರ್ಕಾರ?
ನಾವು ಯಾರ ಟ್ರ‍್ಯಾಪ್‌ಗೂ ಬೀಳೊಲ್ಲ. ಕೇರಳ ನಿಯೋಗ ಬಂದಿತ್ತು. ಅವರು ಏನು ಮಾಡಿದ್ರು? ಯುಪಿಯಲ್ಲೂ ಬುಲ್ಡೋಜ್ ಆಗಿತ್ತು. ಯಾಕೆ ಅಲ್ಲಿಗೆ ಹೋಗಲಿಲ್ಲ ಅವರು. ಮುಂದಿನ ವರ್ಷ ಚುನಾವಣೆ ಇದೆ. ಇದಕ್ಕಾಗಿ ರಾಜಕೀಯ ಮಾಡೋಕೆ ಬಂದಿರೋದು. ಕೇರಳದವರು ಬಂದರು ಏನು ಘೋಷಣೆ ಮಾಡಲಿಲ್ಲ. ಅವರ ಸರ್ಕಾರ, ಪಾರ್ಟಿ ಮನೆ ಕಟ್ಟುಕೊಡ್ತೀನಿ ಅಂತ ಹೇಳಲಿಲ್ಲ. ಕೇರಳದಲ್ಲಿ ಪ್ರವಾಹದಿಂದ ಮನೆ ಹಾಳಾದಾಗ ಕರ್ನಾಟಕ ಸರ್ಕಾರ 100 ಮನೆ ಕಟ್ಟಿ ಕೊಡ್ತಾ ಇದ್ದೇವೆ ಎಂದು ತಿಳಿಸಿದರು. ಅಕ್ರಮ ಮನೆ ಯಾಕೆ ಸಕ್ರಮ ಮಾಡ್ತಾ ಇದ್ದೀರಾ ಅನ್ನೋ ಪ್ರಶ್ನೆಗೆ ಉತ್ತರ ಕೊಡದೆ ಸಚಿವ ಜಮೀರ್ ತೆರೆ ಎಳೆದರು.


