– ಹಸುವಿನ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಜಮೀರ್ ಭೇಟಿ
ಬೆಂಗಳೂರು: ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ದಾರೆ.
ಚಾಮರಾಜಪೇಟೆಯಲ್ಲಿ (Chamrajpet) ಹಸುಗಳ ಕೆಚ್ಚಲು (Cow’s Udder) ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗಳನ್ನು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕನ್ನಡತಿ, ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ಗೊತ್ತಾದ ತಕ್ಷಣ ಮುಖ್ಯಮಂತ್ರಿಗಳು ಕಮೀಷನರ್‌ಗೆ ಕರೆ ಮಾಡಿ ಅದು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದರೂ ಅವನ ಮೇಲೆ ಕಠಿಣ ಕ್ರಮ ಆಗಬೇಕು. ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದ್ದೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಬನಶಂಕರಿ ಲೇಔಟ್ ಜನರು
ನಾಳೆ ಅವರ ಮನೆ ಬಳಿ ಹೋಗಿ ಹೊಸ ಹಸುಗಳನ್ನು ಕೊಡಿಸಿ. ಹಸು ಕೊಡಿಸೋ ಜವಾಬ್ದಾರಿ ನಿನ್ನದು ಎಂದು ವಿನಯ್ ಎಂಬಾತನಿಗೆ ಜಮೀರ್ ಸೂಚನೆ ನೀಡಿದರು. ಇದನ್ನೂ ಓದಿ: ಮೊಬೈಲ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ – ಅದೇ ಹಗ್ಗಕ್ಕೆ ನೇಣು ಬಿಗಿದು ತಂದೆ ಸೂಸೈಡ್