ಶಿವಮೊಗ್ಗ: ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜ್ವರದ ನಡುವೆ ಝಿಕಾ ವೈರಸ್ (Zika virus) ಆತಂಕ ಹೆಚ್ಚಾಗಿದೆ. ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ ವೃದ್ಧರೊಬ್ಬರು ಬಲಿಯಾದ ಬೆನ್ನಲ್ಲೇ ಮತ್ತೊಂದು ಕೇಸ್ ಪತ್ತೆಯಾಗಿದೆ.
ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ 74 ವರ್ಷದ ವ್ಯಕ್ತಿ ಝಿಕಾ ವೈರಸ್‌ಗೆ ಬಲಿಯಾದ ಬೆನ್ನಲ್ಲೇ ಸಾಗರದ ಯುವಕನಲ್ಲಿ ವೈರಸ್ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಯುವಕ ಯಾವುದೇ ಪ್ರಯಾಣ ಹಿನ್ನೆಲೆ ಹೊಂದಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಝಿಕಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು (Health Officer) ಫುಲ್ ಅಲರ್ಟ್ ಆಗಿದ್ದು, ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ
ಮಹಾರಾಷ್ಟ್ರದಲ್ಲಿ 9 ಕೇಸ್ ಪತ್ತೆ:
ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ (Maharashtra) 9 ಝಿಕಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಪೈಕಿ ಐವರು ಗರ್ಭಿಣಿಯರಲ್ಲಿ ವೈರಸ್ ಪತ್ತೆಯಾಗಿದೆ. ಈ ಬೆನ್ನಲ್ಲೇ ಹೆಚ್ಚಿನ ನಿಗಾ ವಹಿಸಿದ್ದು, ಇನ್ನೂ 68 ಗರ್ಭಿಣಿಯರ ಮಾದರಿಗಳನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಲಾಗಿದೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಸಹಾಯಕ ವೈದ್ಯಾಧಿಕಾರಿ ಡಾ.ರಾಜೇಶ್ ದಿಘೆ ತಿಳಿಸಿದ್ದಾರೆ. ಇದನ್ನೂ ಓದಿ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ
ಝಿಕಾ ವೈರಸ್ ರೋಗ ಲಕ್ಷಣಗಳು: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿದ್ದ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ವೈರಸ್ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು ಲಕ್ಷಣಗಳನ್ನು ಹೊಂದಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ