ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ (Zika Virus) ಪತ್ತೆಯಾಗಿದ್ದು, ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ (Health Department) ಆಗಿದೆ.
ಆರಂಭಿಕ ಹಂತದಲ್ಲೇ ಮಾರಕ ವೈರಸ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 31 ಗರ್ಭಿಣಿಯರ (Pregnant Women) ರಕ್ತ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿದೆ. ಇನ್ನೂ ಜೊತೆಯಲ್ಲಿ 4 ಮಂದಿ ಜ್ವರಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ ಅಂತ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್ ಪತ್ತೆ – ಸ್ಥಳೀಯರಲ್ಲಿ ಭೀತಿ
ಮಾದರಿ ಪರೀಕ್ಷೆಗಳ ವರದಿ ಬರಲು 15 ದಿನಗಳಾಗಲಿದ್ದು, ವರದಿ ಬಂದ ನಂತರ ಝಿಕಾ ವೈರಸ್ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಅಲ್ಲಿಯವರೆಗೂ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಗೆ ಸೂಚನೆ ನೀಡಲಾಗಿದೆ. ಸೊಳ್ಳೆ ಪರದೆ ಬಳಸಿಕೊಂಡು ಮಲಗಲು ಸೂಚಿಸಲಾಗಿದೆ. ಸೊಳ್ಳೆ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಂಡು ಝಿಕಾ ವೈರಸ್ ಆತಂಕದಿಂದ ದೂರ ಇರಲು ಸಲಹೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಅಧ್ಯಯನ ಮಾಡುವ ಬದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಪರಮೇಶ್ವರ್
ಝಿಕಾ ವೈರಸ್ ರೋಗ ಲಕ್ಷಣಗಳು: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿದ್ದ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ವೈರಸ್ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು ಲಕ್ಷಣಗಳನ್ನು ಹೊಂದಿದೆ. ಇದನ್ನೂ ಓದಿ: ಕೇಂದ್ರದ ಬಿಜೆಪಿ ನಾಯಕರು ರಾಜ್ಯಕ್ಕೆ ಬರುತ್ತಿದ್ದದ್ದು ಕಲೆಕ್ಷನ್ ಮಾಡೋದಕ್ಕಾ – ಪರಮೇಶ್ವರ್ ಪ್ರಶ್ನೆ
Web Stories