ಯಾದಗಿರಿ: ನಗರದ ಸ್ಟೇಷನ್ ಬಜಾರ್ ಪ್ರೌಢಶಾಲೆಗೆ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ ನೀಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಪರಿಶೀಲನೆ ಜೊತೆಗೆ ಭೋದನೆ ಕೂಡ ಮಾಡಿದ್ದಾರೆ.
ಸಿಇಒ ಶಿಲ್ಪಾ ಶರ್ಮಾ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಪರಿಶೀಲನೆ ವೇಳೆ ಮಕ್ಕಳಿಗೆ ವಿಜ್ಞಾನ ಮತ್ತು ಗಣಿತ ಸೂತ್ರಗಳ ಬಗ್ಗೆ ಪ್ರಶ್ನಿಸಿದರು. ಸಿಇಓ ಕೇಳಿದ ಪ್ರಶ್ನೆಗಳಿಗೆ ಬಹುತೇಕ ವಿದ್ಯಾರ್ಥಿಗಳು ಸಮರ್ಪಕ ಉತ್ತರ ನೀಡಿದರು. ಆದರೆ ಕೆಲವು ಮಕ್ಕಳು ಉತ್ತರ ಹೇಳುವುದರಲ್ಲಿ ಎಡವಿದ್ದರಿಂದ ವಿಷಯ ಶಿಕ್ಷಕರನ್ನು ಎಷ್ಟು ಅಧ್ಯಾಯ ಪಾಠ ಮಾಡಿದ್ದೀರಾ ಎಂದು ಕ್ಲಾಸ್ ತೆಗೆದುಕೊಂಡರು.
Advertisement
Advertisement
ಬೋರ್ಡ್ ಪರೀಕ್ಷೆ ಫಲಿತಾಂಶದಲ್ಲಿ ಯಾದಗಿರಿ ಅತೀ ಹಿಂದುಳಿದ ಜಿಲ್ಲೆಯಾಗಿದೆ. ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತ ಹಲವಾರು ಯೋಜನೆ ಹಾಕಿಕೊಂಡಿದೆ. ಹೀಗಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೆಲವೇ ದಿನಗಳು ಬಾಕಿರುವ ಹಿನ್ನೆಲೆಯಲ್ಲಿ ಫಲಿತಾಂಶ ಸುಧಾರಣೆ ಸಮಿತಿ ಅಧ್ಯಕ್ಷರಾಗಿರುವ ಸಿಇಒ, ವಿವಿಧ ಪ್ರೌಢಶಾಲೆಗಳಿಗೆ ತೆರಳಿ SSLC ವಿದ್ಯಾರ್ಥಿಗಳ ಪರೀಕ್ಷಾ ತಯಾರಿಯನ್ನು ಗಮನಿಸುತ್ತಿದ್ದಾರೆ.