ಹರಾರೆ: 2024ರ ಟಿ20 ವಿಶ್ವಕಪ್ ಟೂರ್ನಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಕ್ರಿಕೆಟ್ ತಂಡವು ಟೀಂ ಇಂಡಿಯಾ (Team India) ವಿರುದ್ಧ ಐದು ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಸರಣಿಯನ್ನಾಡಲಿದೆ ಎಂದು ಜಿಂಬಾಬ್ವೆ ಕ್ರಿಕೆಟ್ ಮಂಡಳಿ (Zimbabwe Cricket Board) ತಿಳಿಸಿದೆ.
ಜಿಂಬಾಬ್ವೆ ಆತಿಥ್ಯದಲ್ಲಿ ಜುಲೈ 6, 7, 10, 13 ಮತ್ತು 14ರಂದು 5 ಪಂದ್ಯಗಳ ಸರಣಿ (T20I Series) ನಡೆಯಲಿದ್ದು, ಎಲ್ಲಾ ಪಂದ್ಯಗಳು ರಾಜಧಾನಿಯಲ್ಲಿರುವ ಹರಾರೆ ಸ್ಪೋರ್ಟ್ಸ್‌ಕ್ಲಬ್ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯು ಬಿಸಿಸಿಐ ಮತ್ತು ಜಿಂಬಾಬ್ವೆ ಕ್ರಿಕೆಟ್ ಮಂಡಳಿ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುತ್ತದೆ ಎಂಬುದಾಗಿ ಮಂಡಳಿ ಸದಸ್ಯರು ತಿಳಿಸಿದ್ದಾರೆ.
Advertisement
Advertisement
ಈ ಕುರಿತು ಮಾತನಾಡಿರುವ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಅಧ್ಯಕ್ಷ ತವೆಂಗ್ವಾ ಮುಕುಹ್ಲಾನಿ, ಟೀಂ ಇಂಡಿಯಾ ಜೊತೆಗೆ ಟಿ20 ಸರಣಿ ಆಯೋಜಿಸುತ್ತಿರುವುದು ನಿಜಕ್ಕೂ ರೋಮಾಂಚನಕಾರಿಯಾಗಿದೆ. ಇದರೊಂದಿಗೆ ನಮ್ಮ ಮಂಡಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದೆ. ಅದಕ್ಕಾಗಿ ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: U19 World Cup: ಮತ್ತೆ ವಿಶ್ವಕಪ್‌ನಲ್ಲಿ ಭಾರತಕ್ಕೆ ಆಸೀಸ್ ಎದುರಾಳಿ – ಫೆ.11ರಂದು ಫೈನಲ್
Advertisement
Advertisement
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಹ ಇದಕ್ಕೆ ಪ್ರತಿಕ್ರಿಯಿಸಿದ್ದು, ಬಿಸಿಸಿಐ ಜಾಗತಿಕ ಕ್ರಿಕೆಟ್ ಸಮುದಾಯಕ್ಕೆ ಕೊಡುಗೆ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಂತದಲ್ಲಿ ಜಿಂಬಾಬ್ವೆ ಕ್ರಿಕೆಟ್‌ಗೆ ನಮ್ಮ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ICC ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್ ಬೂಮ್ ಬುಮ್ರಾ
ಟಿ20 ವಿಶ್ವಕಪ್ ಎಲ್ಲಿ-ಯಾವಾಗ?
ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಟೂರ್ನಿಯ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಮುಖಾಮುಖಿಯಾಗಲಿವೆ.
ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಈ ಬಾರಿ ಜೂನ್ 1 ರಿಂದ ಜೂನ್ 29ರ ವರೆಗೆ ನಡೆಯಲಿದೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್-12 ಹಂತವನ್ನು ಸೂಪರ್-8ಗೆ ಇಳಿಸಲಾಗಿದೆ. ಸೂಪರ್-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಇದನ್ನೂ ಓದಿ: