ನವದೆಹಲಿ: ಕಾರು ಮತ್ತು ಮೋಟಾರ್ ಬೈಕ್ ಡಿಕ್ಕಿಯಾಗಿ ಝೊಮ್ಯಾಟೋ ಡೆಲಿವರಿ ಬಾಯ್ ಸೇರಿ ಇಬ್ಬರು ಹದಿಹರೆಯದವರು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಈಶಾನ್ಯ ದೆಹಲಿಯ ಶಕರ್‌ಪುರ್ ಪ್ರದೇಶದಲ್ಲಿ ನಡೆದಿದೆ.
Advertisement
ಜ್ಯೋತಿ (17) ಮತ್ತು ಭಾರತಿ (19) ಮೃತ ದುರ್ದೈವಿಗಳು. ಯುವತಿಯರು ಮತ್ತು ಅವರ ಕುಟುಂಬದ ಇತರ ಐವರು ಪಶ್ಚಿಮ ದೆಹಲಿಯ ಪೀರಾಗರ್ಹಿಯಿಂದ ಕರ್ಕರ್ಡೂಮಾದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದರು. ಕಾರಿನ ಮುಂಬದಿಯಲ್ಲಿ ಮೂವರು ಕುಳಿತಿದ್ದರೆ, ನಾಲ್ವರು ಹಿಂದೆ ಕುಳಿತಿದ್ದರು. ಈ ವೇಳೆ ಕಾರು ಲಕ್ಷ್ಮಿನಗರದಲ್ಲಿ ಹಾದು ಹೋಗುತ್ತಿದ್ದಾಗ ಝೊಮ್ಯಾಟೋ ಡೆಲಿವರಿ ಬಾಯ್ ಬೈಕ್ ಅಡ್ಡ ಬಂದಿದೆ. ಈ ವೇಳೆ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ – ಅತ್ಯಾಚಾರ ಆರೋಪ ಮಾಡಿದ ಕುಟುಂಬಸ್ಥರು
Advertisement
Advertisement
ಪಲ್ಟಿಯಾದ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತ ಝೊಮ್ಯಾಟೋ ಡೆಲಿವರಿ ಬಾಯ್ ಯಾರು ಎಂದು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಅಪಘಾತದ ನಂತರ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯ ಅಧಿಕಾರಿಗಳು, ಯಾವುದೇ ಹಾಸಿಗೆ ಲಭ್ಯವಿಲ್ಲ ಎಂದು ಹೇಳಿದರು. ಅವರು ಹಾಸಿಗೆಯ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಂತೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಚಿಕಿತ್ಸೆಗೆ 1 ಲಕ್ಷ ರೂ. ಚಕ್ ಕೊಟ್ಟ
ಗ್ರಾಹಕರಿಗೆ ಆರ್ಡರ್ ಮಾಡಿದ ಆಹಾರವನ್ನು 10 ನಿಮಿಷದಲ್ಲಿ ತಲುಪಿಸಲಾಗುವುದು ಎಂದು ಝೊಮ್ಯಾಟೋ ಘೋಷಿಸಿದ ಒಂದು ತಿಂಗಳ ನಂತರ ಈ ರೀತಿಯ ಅನಾಹುತಗಳು ಸಂಭವಿಸುತ್ತಿವೆ. ನಿಗದಿತ ಸಮಯಕ್ಕೆ ಆರ್ಡರ್ ಡೆಲಿವರಿ ಮಾಡುವ ಧಾವಂತದಲ್ಲಿ ಇಂತಹ ದುರಂತಗಳು ಸಂಭವಿಸುತ್ತಿರುವುದು ಡೆಲಿವರಿ ಬಾಯ್‍ಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.