ಬ್ಯಾಂಕಾಕ್: ಥಾಯ್ಲೆಂಡ್‌ನ (Thailand) ಮೃಗಾಲಯದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಸಫಾರಿ (Safari) ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ (Lions) ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿವೆ.
ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭೀಕರ ಘಟನೆ ನಡೆದಿದೆ. ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಪಾಲಕ ಜಿಯಾನ್ ರಂಗ್ಖರಸಾಮೀ ಎಂಬಾತನ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಸುಮಾರು 15 ನಿಮಿಷಗಳ ಕಾಲ ನಡೆದ ಈ ಭೀಕರ ಘಟನೆಗೆ ನೂರಾರು ಪ್ರವಾಸಿಗರು ಸಾಕ್ಷಿಯಾಗಿದ್ದರು. ಅಲ್ಲದೆ ಕೆಲವರು ತಮ್ಮ ಮೊಬೈಲ್‌ನಲ್ಲಿ ಈ ಭೀಕರ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ: ನೇಪಾಳ ಪ್ರಧಾನಿ
ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಈ ಕುರಿತು ಆಘಾತ ವ್ಯಕ್ತಪಡಿಸಿರುವ ಸಫಾರಿ ವರ್ಲ್ಡ್ ಆಡಳಿತ ಮಂಡಳಿ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಅಲ್ಲದೆ ಮೃಗಾಲಯದಲ್ಲಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ