– ಬೈಕ್ಗೆ ಡಿಕ್ಕಿ ಸಂಭವಿಸಿ ಅಪಘಾತ
ಚಿಕ್ಕೋಡಿ/ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಅಂಬುಲೆನ್ಸ್ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.
Advertisement
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಅಂಬುಲೆನ್ಸ್ ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ಮೂಲದ 51 ವರ್ಷದ ಕೊರೊನಾ ಸೋಂಕಿತ ಹಾಗೂ ರಬಕವಿ ಮೂಲದ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ.
Advertisement
Advertisement
ಅಪಘಾತ ಸಂಭವಿಸಿದ ತಕ್ಷಣ ಚಿಕಿತ್ಸೆಗಾಗಿ ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆತರಲಾಗಿದ್ದು, ಆಸ್ಪತ್ರೆಯಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತ ಸೋಂಕಿತ ಮಹಾರಾಷ್ಟ್ರದ ಜತ್ತ ತಾಲೂಕಿನ ಸಿಂಧೂರ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅಥಣಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೋಂಕಿತ ದಾಖಲಾಗಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕರೆದೊಯ್ಯುತ್ತಿದ್ದ ವೇಳೆ ಅಂಬುಲೆನ್ಸ್ ಪಲ್ಟಿಯಾಗಿದೆ. ಉಳಿದ ಇಬ್ಬರು ಗಾಯಾಳುಗಳಿಗೆ ಹುಕ್ಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.