ನವದೆಹಲಿ: ಕೆಆರ್ಎಸ್ ಆಣೆಕಟ್ಟು ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಲೋಕಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಧ್ವನಿ ಎತ್ತಿದ್ದಾರೆ.
Advertisement
ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದ ಸುಮಲತಾ ಅಂಬರೀಶ್ ಅವರು, ಕೆಆರ್ಎಸ್ ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದಕ್ಕಾಗಿ ರಾಸಾಯನಿಕ ಸ್ಫೋಟಕಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲದ ಗುಣಮಟ್ಟ ಕುಸಿದಿದೆ. ಬೆಳೆಗಳ ಮೇಲೆ ಪರಿಣಾಮ ಬೀರಿದೆ. ವಾಯುಮಾಲಿನ್ಯದಿಂದ ಜನರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: KRS ಸುತ್ತಮುತ್ತಲಿನ ಗಣಿಗಾರಿಕೆ ಬಗ್ಗೆ ತನಿಖೆಗೆ ಅಮಿತ್ ಶಾಗೆ ಸುಮಲತಾ ಮನವಿ
Advertisement
Advertisement
ಕೇಂದ್ರ ಸರ್ಕಾರ ಕೂಡಲೇ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಗ್ರಾಮಗಳನ್ನು ಉಳಿಸಬೇಕು ಮತ್ತು ಇವುಗಳ ಮೇಲ್ವಿಚಾರಣೆ ಮಾಡಬೇಕೆಂದು ಸುಮಲತಾ ಅವರು ಮನವಿ ಮಾಡಿಕೊಂಡರು. ಇದಕ್ಕೆ ಉತ್ತರಿಸಿದ ಸಚಿವ ಭೂಪೇಂದ್ರ ಯಾದವ್ ಅವರು, 34 ರಾಜ್ಯಗಳಲ್ಲಿ 1,140 ವಾಯು ನಿಯಂತ್ರಣ ಕೇಂದ್ರಗಳು ಸ್ಥಾಪಿಸಿದ್ದು, ಮಂಡ್ಯ ಕ್ಷೇತ್ರದ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು ಎಂದು ಉತ್ತರ ನೀಡಿದರು. ಇದನ್ನೂ ಓದಿ: ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ
Advertisement
ಈ ಹಿಂದೆ ಮಂಡ್ಯ ರಾಜಭವನದಲ್ಲಿ ಮತನಾಡಿದ್ದ ಸುಮಲತಾ ಅಂಬರೀಶ್ ಅವರು ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತಷ್ಟೇ ನಾನು ಸಮಸ್ಯೆ ಸೃಷ್ಟಿಸಿಲ್ಲ, ಯಾರು ಸಮಸ್ಯೆ ಸೃಷ್ಟಿಸಿದಾರೋ ಅವರು ಅರ್ಥ ಮಾಡ್ಕೊಂಡ್ರೆ ಸಾಕು. ಅಕ್ರಮ ಗಣಿಗಾರಿಕೆ ನಿಲ್ಲಿಸುವ ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಕಷ್ಟ ಅಂತ ನನಗೂ ಗೊತ್ತು. ಆದರೆ ನನ್ನ ಪ್ರಯತ್ನ ನಾನು ಮಾಡುತ್ತೇನೆ. ಸಂಸತ್ ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡ್ತೇನೆ. ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲರ ಗಮನಕ್ಕೆ ತಂದಿದ್ದೇನೆ. ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತದೆ. ನಾನು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ ಎಂದು ಹೇಳಿದ್ದರು.