-ಅಖಂಡ ಶ್ರೀನಿವಾಸಮೂರ್ತಿಗೆ ಬಿಜೆಪಿ ಸರ್ಕಾರ ನ್ಯಾಯ ಕೊಡಿಸುತ್ತದೆ
ಉಡುಪಿ: ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿರುವ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಉತ್ತರಿಸಬೇಕು. ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಶರಣಾಗುವಂತೆ ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ಸಂಪತ್ ರಾಜ್ನನ್ನು ಪೊಲೀಸರ ಕೈಗೆ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡಬೇಕು. ಅಖಂಡ ಶ್ರೀನಿವಾಸಮೂರ್ತಿಗೆ ಭಾರತೀಯ ಜನತಾ ಪಾರ್ಟಿ ಸರ್ಕಾರ ನ್ಯಾಯ ಕೊಡಿಸುತ್ತದೆ ಎಂದು ಹೇಳಿದರು.
Advertisement
Advertisement
ಶಿರಾ ಹಾಗೂ ಆರ್.ಆರ್.ನಗರ ಈ ಎರಡು ಕ್ಷೇತ್ರದ ಸೋಲಿಗೆ ಡಿಕೆಶಿ, ಸಿದ್ದರಾಮಯ್ಯ ಕಾರಣ ಅಂತ ಆರೋಪಿಸಿದ ಕಟೀಲ್, ಆರ್.ಆರ್.ನಗರವನ್ನು ಸೋಲಿಸಿದ್ದು ಸಿದ್ದರಾಮಯ್ಯ, ಶಿರಾ ಕ್ಷೇತ್ರವನ್ನು ಸೋಲಿಸಿದ್ದು ಡಿಕೆ ಶಿವಕುಮಾರ್. ಒಬ್ಬೊಬ್ಬರು ಒಂದೊಂದು ಕ್ಷೇತ್ರವನ್ನು ಸೋಲಿಸುವ ಮೂಲಕ ಕಾರ್ಯಕರ್ತರಿಗೆ ಮತದಾರರಿಗೆ ಮೋಸ ಮಾಡಿದ್ದಾರೆ. ಕಾರ್ಯಕರ್ತರಿಗೆ ಈ ವಿಚಾರ ಗೊತ್ತಾಗಿ ಅಸಮಾಧಾನ ಭುಗಿಲೆದ್ದಿದೆ ಎಂದರು.
Advertisement
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳ ತೀರ್ಮಾನದ ನಂತರ ಪಕ್ಷದೊಳಗೆ ಚರ್ಚೆಯಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಡಿಯೂರಪ್ಪನವರು ಅನುಭವಿಗಳು, ರಾಜ್ಯದ ಹಿತದೃಷ್ಟಿಯಿಂದ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ತಿಳಿಸಿದರು.
Advertisement
ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಮತದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಮತ್ತು ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಪಕ್ಷದ ಸೀಮಿತತೆ ಮತ್ತು ನಿಯಮವನ್ನು ಮೀರಿ ಯಾರು ವರ್ತಿಸಬಾರದು. ಪಕ್ಷದ ನಿಯಮಗಳ ಅಡಿಯಲ್ಲೇ ಎಲ್ಲರೂ ಮಾತನಾಡಬೇಕು. ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಂಡಿದ್ದೇವೆ. ಬಸನಗೌಡ ಪಾಟೀಲ್ ಯತ್ನಾಳ್ಗೆ ಏನು ಮಾಡಬೇಕು ಅದನ್ನು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.