ನವದೆಹಲಿ: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದು ರಾಮ ಮಂದಿರ ನಿರ್ಮಿಸುವ ದಶಕಗಳ ಕನಸು ಈಡೇರಿದಂತಾಗಲಿದೆ.
ಬೆಳಗ್ಗೆ ಎಂಟು ಗಂಟೆಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಮಧ್ಯಾಹ್ನ ಮೂರು ಗಂಟೆಗೆ ಶಿಲನ್ಯಾಸ ಕಾರ್ಯಕ್ರಮ ನೆರೆವೇರಲಿದೆ ಎಂದು ಮೂಲಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ನಡುವಿನ ಅವಧಿಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
Advertisement
Advertisement
ಕಳೆದ ನಾಲ್ಕು ತಿಂಗಳಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಉದ್ಘಾಟನ ಕಾರ್ಯಕ್ರಮವನ್ನು ಮತ್ತು ವಿವಿಧ ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಬಳಿಕ ಮೊದಲ ಬಾರಿಗೆ ಕಾರ್ಯಕ್ರಮವೊಂದರಲ್ಲಿ ದೈಹಿಕವಾಗಿ ಉಪಸ್ಥಿತರಿಲಿದ್ದಾರೆ.
Advertisement
Advertisement
ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಪ್ರಮುಖ 300 ಮಂದಿ ಹೋರಾಟಗಾರಿಗೆ ಆಹ್ವಾನಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ.