– ಮೊಮ್ಮಗನಿಗಾಗಿ ಕಾದು ಕುಳಿತಿದ್ದ ಅಜ್ಜ-ಅಜ್ಜಿಗೆ ಶಾಕ್
ತಿರುವನಂತಪುರಂ: ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾದವರ ಒಂದೊಂದೇ ಮನಮಿಡಿಯುವ ಕಥೆಗಳು ಬೆಳಕಿಗೆ ಬರುತ್ತಿದೆ.
ಹೌದು. 1 ವರ್ಷದ ಅಜಮ್ ಮೊಹಮ್ಮದ್ ತನ್ನ ಅಜ್ಜಿ ಮನೆಗೆ ಹೋಗುವ ಮುನ್ನವೇ ಕಣ್ಣುಮುಚ್ಚಿರುವ ಮನಕಲಕುವ ಘಟನೆಯೊಂದು ನಡೆದಿದೆ. ಕೋಯಿಕ್ಕೋಡ್ ವೆಲ್ಲಿಮಡುಕುನ್ನು ಮ್ದು ನಿಜಮ್ ಹಾಗೂ ಸಾಹಿರಾ ದಂಪತಿಗೆ ಒಂದು ವರ್ಷಗಳ ಹಿಂದೆ ಅಜಮ್ ಜನಿಸಿದ್ದಾನೆ.
Advertisement
Advertisement
ಮಗುವಿಗೆ 1 ವರ್ಷವಾದ ಬಳಿಕ ಇದೀಗ ತಮ್ಮ ಮಗುವನ್ನು ತಾಯ್ನಾಡಿಗೆ ಪರಿಚಯಿಸಲು ತಾಯಿ ತನ್ನ ಮೂವರು ಮಕ್ಕಳೊಂದಿಗೆ ವಿಮಾನ ಹತ್ತಿದ್ದರು. ಆದರೆ ಅಜಮ್ ಮೊದಲ ಪ್ರಯಾಣವೇ ಅಂತಿಮ ಪ್ರಯಾಣವಾಗಿದ್ದು, ಇತ್ತ ಮೊಮ್ಮಗನನ್ನು ನೋಡಲು ಕಾತರದಿಂದ ಕಾಯುತ್ತಿದ್ದ ಅಜ್ಜ-ಅಜ್ಜಿಗೆ ದಿಗಿಲು ಬಡಿದಂತಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ
Advertisement
Advertisement
ಅಜಮ್ ತಾಯಿ 29 ವರ್ಷದ ಸಾಹಿರಾ ಬಾನು ಕೂಡ ದುರ್ಘಟನೆಗೆ ಬಲಿಯಾಗಿದ್ದಾರೆ. ಅಜಮ್ ಸಹೋದರರಾದ 8 ವರ್ಷದ ಇಹಾನ್ ಮೊಹಮ್ಮದ್ ಹಾಗೂ 4 ವರ್ಷದ ಮರಿಯಮ್ ಮೊಹಮ್ಮದ್ ಗಾಯಗೊಂಡಿದ್ದು, ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಪರಿಪುರದಲ್ಲಿ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಪುಟ್ಟ ಕಂದಮ್ಮ ಅಜಮ್ ತನ್ನ ತಾಯಿಯ ತೊಡೆಯ ಮೇಲೆ ಕುಳಿತುಕೊಂಡಿದ್ದ ಎನ್ನಲಾಗಿದೆ.
ನಿಜಮ್ ಹಾಗೂ ಅವರ ಕುಟುಂಬ ಕಳೆದ 10 ವರ್ಷಗಳಿಂದ ದುಬೈನಲ್ಲಿ ನೆಲೆಸಿದೆ. ನಿಜಮ್ ಅಲ್ಲೇ ಉಳಿದುಕೊಂಡಿದ್ದು, ಸಾಹಿರಾ ತಮ್ಮ ಮೂವರು ಮಕ್ಕಳೊಂದಿಗೆ ಶುಕ್ರವಾರ ದುಬೈನಿಂದ ತಾಯ್ನಾಡಿಗೆ ಬರಲು ವಿಮಾನ ಏರಿದ್ದಾರೆ. ಆದರೆ ತಾಯ್ನಾಡಿಗೆ ಕಾಲಿಡುವ ಮೊದಲೇ ದುರಂತಕ್ಕೀಡಾಗಿದ್ದಾರೆ. ಸಾಹಿರಾಗೆ ಹೆರಿಗೆ ಸಮಯದಲ್ಲಿ ಜೊತೆಗಿದಿದ್ದರಿಂದ ತಾಯಿ ಸಕೀನಾ ಮಾತ್ರ ಅಜಮ್ ನನ್ನು ನೋಡಿದ್ದರು. ಹೀಗಾಗಿ ಮಗನಿಗೆ 1 ವರ್ಷ ತುಂಬಿದ ಬಳಿಕ ಆತನನ್ನು ತಾಯ್ನಾಡು ಕಕ್ಕಡ್ಗೆ ಪರಿಚಯಿಸಲು ದಂಪತಿ ತುದಿಗಾಲಿನಲ್ಲಿದ್ದರು ಎಂದು ಸಾಹಿರಾ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್ ಸಾಠೆ 2 ಬಾರಿ ಲ್ಯಾಂಡಿಗ್ಗೆ ಪ್ರಯತ್ನಿಸಿದ್ರು
ಕಳೆದ ರಾತ್ರಿ ಮಕ್ಕಳು ಎಲ್ಲಿದ್ದಾರೆ ಎಂದು ಹುಡುಕಾಡಿದೆವು. ಆದರೆ ಇಬ್ಬರು ಮಕ್ಕಳು ಪ್ರತ್ಯೇಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ನಿಟ್ಟುಸಿರು ಬಿಟ್ಟೆವು. ಇಬ್ಬರೂ ಕೂಡ ಅಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಾಹಿರಾ ಸಂಬಂಧಿಕರು ತಿಳಿಸಿದ್ದಾರೆ. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್ ಮೊದಲು ಕುಟುಂಬದೊಂದಿಗೆ ಫೇಸ್ಶೀಲ್ಡ್ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು
ಶುಕ್ರವಾರ ರಾತ್ರಿ ವಿಮಾನ ದುರಂತ ಸಂಭವಿಸುತ್ತಿದ್ದಂತೆಯೇ ಗಂಭೀರ ಗಾಯಗೊಂಡಿದ್ದ ಸಾಹಿರಾರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಇತ್ತ ಅಜಮ್ ಕೂಡ ಕೋಯಿಕ್ಕೋಡ್ ಮೆಡಿಕಲ್ ಕಾಲೇಜ್ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಹೋದರ ಮರಿಯಮ್ ನನ್ನು ಮೊದಲು ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಹಿರಾ ತಂದೆ ನಿವೃತ್ತ ಶಿಕ್ಷಕರಾಗಿದ್ದು, ಮೊಮ್ಮಗನ ಬರುವಿಕೆಗಾಗಿ ಕಾದು ಕುಳಿತಿದ್ದು, ಇದೀಗ ಮಗಳು, ಮೊಮ್ಮಗನನ್ನು ಕಳೆದುಕೊಂಡು ಕುಟುಂಬ ದುಃಖದ ಕಡಲಲ್ಲಿ ಮುಳುಗಿದೆ. ಇದನ್ನೂ ಓದಿ: ಮಂಗಳೂರು ದುರಂತದ ಬಳಿಕ ಎಚ್ಚರಿಸಿದ್ದೆ, ಆದ್ರೆ ನಿರ್ಲಕ್ಷಿಸಿದ್ರು – ವಾಯು ಸುರಕ್ಷಾ ತಜ್ಞ
#WATCH Latest visuals from Kozhikode International Airport in Karipur, Kerala where an #AirIndiaExpress flight crash-landed yesterday.
18 people, including two pilots, have lost their lives in the incident. pic.twitter.com/r1YRiIkbrM
— ANI (@ANI) August 8, 2020