ಚಿತ್ರದುರ್ಗ: ತಾಲೂಕಿನ ಭರಮಸಾಗರ ಹೋಬಳಿಯ ಗ್ರಾಮದಲ್ಲಿ ಕೆಲದಿನಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಇಂದು ಸಂತ್ರಸ್ತೆಯ ಮನೆಗೆ ತೆರಳಿದ ರಾಜ್ಯ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು, ಆಕೆಯ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು ಜೊತೆಗೆ ವೈಯಕ್ತಿಕವಾಗಿ 2 ಲಕ್ಷ ರೂ. ನೀಡುವುದರೊಂದಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಭರವಸೆ ನೀಡಿದರು.
Advertisement
ಸಂತ್ರಸ್ತ ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿದ ಶ್ರೀರಾಮುಲು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಸಚಿವರು, ಅಪ್ರಾಪ್ತ ಬಾಲಕಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು, ಅವರ ನೋವುಗಳನ್ನು ಹಂಚಿಕೊಳ್ಳಲು ಭೇಟಿ ನೀಡಿದ್ದೇವೆ. ಯಾರಿಗೂ ಕೂಡ ಇಂತಹ ಪರಿಸ್ಥಿತಿ ಬರಬಾರದು. ಇಂತಹ ಪ್ರಕರಣಗಳು ಮರುಕಳಿಸಬಾರದು. ಇದೇ ಕೊನೆಯಾಗಬೇಕು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಟಾಲೆಸ್ಟ್ ಲೀಡರ್ಗಳ ಬಗ್ಗೆ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸಿ: ಶ್ರೀರಾಮುಲು
Advertisement
Advertisement
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಯನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾನೂನಿನ ಪ್ರಕಾರ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಸಂತ್ರಸ್ತ ಬಾಲಕಿಯ ಪೋಷಕರು ಇದ್ದರು.
Advertisement