ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮಕ್ಕಳ್ ನಿಧಿ ಮೈಯಂ(ಎಂಎನ್ಎಂ) ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರ ಮತ್ತು ಯುವ ಜನರ ಅಭಿವೃದ್ಧಿಗಳಿಗೆ ಹೆಚ್ಚು ಹೊತ್ತು ನೀಡುವುದಾಗಿ ಕಾಲಿವುಡ್ ನಟ ಕಮಲ್ ಹಾಸನ್ ಬುಧವಾರ ಘೋಷಿಸಿದ್ದಾರೆ.
ಏಪ್ರಿಲ್ 6ರಂದು ನಡೆಯಲಿರುವ ತಮಿಳುನಾಡು ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಅವಕಾಶ ನೀಡಿದರೆ ಶೇ.50ರಷ್ಟು ಮೀಸಲಾತಿಯನ್ನು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರಿಗೆ ನೀಡುವುದಾಗಿ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಭರವಸೆ ನೀಡಿದ್ದಾರೆ.
Advertisement
Advertisement
ಇಷ್ಟೇ ಅಲ್ಲದೇ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆ, ಮಹಿಳೆಯರಿಗೆ ರಕ್ಷಣೆ, ಒಂಟಿ ತಾಯಂದಿರಿಗೆ ಬೆಂಬಲ, ಎಲ್ಲಾ ಗರ್ಭಿಣಿಯರಿಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ಯುವಕರಿಗೆ 50 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದು, ನಿರುದ್ಯೋಗ ಭತ್ಯೆ ಮಾಡಲಾಗುವುದು ಎಂದು ಹೇಳಿದ್ದಾರೆ.
Advertisement
Advertisement
ಮುಂಬರುವ ಚುನಾವಣೆಯಲ್ಲಿ ಎಂಎನ್ಎಂ ಮೈತ್ರಿಗಾಗಿ ಈಗಾಗಲೇ ಹಲವಾರು ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಎಂಎನ್ಎಂ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ 7ರಂದು ಪ್ರಕಟಿಸುವ ನಿರೀಕ್ಷೆ ಇದೆ. ಆಡಳಿತ ಪಕ್ಷ ಎಐಎಡಿಎಂಕೆ-ಬಿಜೆಪಿ ಮತ್ತು ಡಿಎಂಕೆ-ಕಾಂಗ್ರೆಸ್ ನೇತೃತ್ವದ ಮಯತ್ರಿ ಪಕ್ಷಗಳು ಈಗಾಗಲೇ ಚುನಾವಣೆ ಪ್ರಚಾರವನ್ನು ಆರಂಭಿಸಿದೆ.