– ಕ್ಷೇತ್ರದ ಜನರಲ್ಲಿ ಶಾಸಕ ಮನವಿ
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಎಂದು ದೃಢವಾಗಿದೆ.
ಈ ಸಂಬಂಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಶಿವಲಿಂಗೇಗೌಡರು, ನನ್ನ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಕ್ಷೇತ್ರದ ಜನರಿಗೆ ಏನಾದರೂ ಸಮಸ್ಯೆಯಿದ್ದರೆ ಮನೆಯ ಬಳಿ ಬಾರದೆ ದಯವಿಟ್ಟು ಫೋನ್ ಮುಖಾಂತರ ಸಂಪರ್ಕಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ನನ್ನ ಸಂಪರ್ಕದಲ್ಲಿದ್ದ ಗನ್ಮ್ಯಾನ್ ಮತ್ತು ಪಿಎ ಎಲ್ಲರೂ ಕೊರೊನಾ ಟೆಸ್ಟ್ ಮಾಡಿದ್ದು, ವರದಿ ನೆಗೆಟಿವ್ ಎಂದು ಬಂದಿದೆ. ಆದರೆ ನನ್ನ ಪತ್ನಿ ಪುಷ್ಪ ಅವರಿಗೆ ಮಾತ್ರ ಕೊರೊನಾ ಪಾಸಿಟಿವ್ ಎಂದು ಬಂದಿದ್ದು, ಅವರು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
Advertisement
Advertisement
ಈ ಹಿನ್ನೆಲೆಯಲ್ಲಿ ಕ್ಷೇತ್ರದ ಜನ ಏನಾದರೂ ಸಮಸ್ಯೆಯಿದ್ದಲ್ಲಿ ಮನೆಯ ಬಳಿ ಬರಬೇಡಿ. ನೀವು ನನಗೆ ಒಂದು ಕರೆ ಮಾಡಿದರೆ ಸಾಕು, ನಾನು ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಶಾಸಕರು ತಮ್ಮ ಕ್ಷೇತ್ರದ ಜನರಲ್ಲಿ ವಿನಂತಿ ಮಾಡಿದ್ದಾರೆ.