ಲಕ್ನೋ: ಆಮ್ಲಜನಕದ ಕೊರತೆಯಿಂದಾಗಿ ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಾರ್ಬಂಕಿಯಲ್ಲಿನ ಆಸ್ಪತ್ರೆಯೊಂದರಲ್ಲಿ ನಡೆದಿದೆ.
Advertisement
ಆಸ್ಪತ್ರೆಗಳಲ್ಲಿ ಆಮ್ಲಜನಕ ಖಾಲಿಯಾಗಿರವ ಬಗ್ಗೆ ಆಸ್ಪತ್ರೆ ಮೊದಲೆ ತಿಳಿಸಿತ್ತು. ಆದರೆ ಸರ್ಕಾರ ಮಾತ್ರ ಆಕ್ಸಿಜನ್ ಪೂರೈಕೆ ಮಾಡಿರಲಿಲ್ಲ. ಅವಳಿ ಮಕ್ಕಳು ನಿನ್ನೆ ರಾತ್ರಿ ಜನಿಸಿದ್ದವು. ಶಿಶುಗಳಿಗೆ ಆಮ್ಲಜನಕದ ಅವಶ್ಯಕತೆ ಇತ್ತು. ಆದರೆ ಆಮ್ಲಜನಕವನ್ನು ಪೂರೈಕೆ ಮಾಡಲು ಆಗದೆ ಇರುವ ಕಾರಣ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
Advertisement
Advertisement
ಆಮ್ಲಜನಕ ಪೂರೈಕೆ ವಿಚಾರದಲ್ಲಿ ಸರ್ಕಾರ ಒತ್ತಡದಲ್ಲಿದೆ. ನಮ್ಮ ಕೈಲಾದಷ್ಟು ಮಟ್ಟಿಗೆ ಆಕ್ಸಿಜನ್ ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಉತ್ತರಪ್ರದೇಶ ಆರೋಗ್ಯ ಇಲಾಖೆ ತಿಳಿಸಿದೆ. ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ. ಆದರತೆ ಆಕ್ಸಿಜನ್ಅನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧವಾಗಿ ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದರು.
Advertisement