– ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿ ರಚನೆ
– ಕೊರೊನಾ ವಾರಿಯರ್ಸ್ಗೆ ಮೊದಲ ಆದ್ಯತೆ
– ಬಳಿಕ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ
ಬೆಂಗಳೂರು: ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಲಸಿಕೆ ವಿತರಣೆಯ ತಯಾರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಈ ಕುರಿತು ವಿವರಿಸಿದ್ದಾರೆ.
Advertisement
Participated in the Video Conference today chaired by PM Shri @narendramodi Ji on Covid19 management. Discussed the state’s plan for vaccine administration and assured Karnataka is fully equipped for a smooth roll-out of the vaccine as and when it’s ready.@AmitShah @PMOIndia pic.twitter.com/XpsRuQkyQD
— B.S. Yediyurappa (@BSYBJP) November 24, 2020
Advertisement
ಸಭೆಯ ಬಳಿಕ ಮಾತನಾಡಿದ ಅವರು, ಕೊರೊನಾ ಲಸಿಕೆ ಬಗ್ಗೆ ವಿವರವಾದ ಚರ್ಚೆ ನಡೆಸಲಾಗಿದೆ. ಹೆಚ್ಚು ಕೋವಿಡ್ ಪ್ರಕರಣಗಳು ಹಾಗೂ ಕಡಿಮೆ ಪ್ರಕರಣಗಳು ಇರುವ ರಾಜ್ಯಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.
Advertisement
ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಅವರು ಭಾಗವಹಿಸಿ ಲಸಿಕೆ ಬಗ್ಗೆ ಮಾಹಿತಿ ನೀಡಿದರು. ಯಾವ್ಯಾವ ದೇಶಗಳಲ್ಲಿ ಲಸಿಕೆ ತಯಾರಿಕೆ ಸ್ಥಿತಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಿಳಿಸಿದರು. ಇಡೀ ವಿಶ್ವದಲ್ಲಿ ಹಲವು ಕಡೆ ಲಸಿಕೆ ತಯಾರಾಗುತ್ತಿದೆ. ಈ ಪೈಕಿ ನಮ್ಮ ದೇಶದಲ್ಲಿ 50 ಲಸಿಕೆಗಳು ಕ್ಲಿನಿಕಲ್ ಸಂಶೋಧನೆಗಳ ಹಂತದಲ್ಲಿವೆ. 25 ಲಸಿಕೆಗಳು ಅಡ್ವಾನ್ಸ್ ಟ್ರಯಲ್ ನಲ್ಲಿವೆ. 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಭಾರತದಲ್ಲಿ ಒಟ್ಟು 24 ಸಂಸ್ಥೆಗಳಿಗೆ ಲಸಿಕೆ ತಯಾರಿಸುವ ಸಾಮರ್ಥ್ಯ ಇದೆ ಎಂಬ ಮಾಹಿತಿ ನೀಡಿದರು ಎಂದು ಬೊಮ್ಮಾಯಿ ತಿಳಿಸಿದರು.
Advertisement
30 ಕೋಟಿ ಜನರಿಗೆ ಲಸಿಕೆ:
ಲಸಿಕೆ ಬರುವಾಗ ಸರಿಯಾದ ರೀತಿಯಲ್ಲಿ ವಿತರಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಅದ್ಯತೆ ಮೇರೆಗೆ ವಿತರಣೆ ಬಗ್ಗೆ ಸಭೆಯಲ್ಲಿ ಹೇಳಲಾಯಿತು. ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಂಚುವ ಉದ್ದೇಶ ಹೊಂದಲಾಗಿದೆ. ಈ ಪೈಕಿ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ, 2 ಕೋಟಿ ಕೊರೊನಾ ವಾರಿಯರ್ಸ್ಗೆ ಹಾಗೂ 26 ಕೋಟಿ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.
ಬೂತ್ ಮಾದರಿಯಲ್ಲಿ ಹಂಚಿಕೆ:
ಲಸಿಕೆ ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿಗಳ ರಚನೆಗೆ ನಿರ್ಧರಿಸಲಾಗಿದ್ದು, ಸಿಎಂ ನೇತೃತ್ವದಲ್ಲಿ, ಡಿಸಿಗಳ ನೇತೃತ್ವದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆಗೆ ನಿರ್ಧಾರಿಸಲಾಗಿದೆ. ಲಸಿಕೆ ಹಂಚಿಕೆಗೆ ಬೂತ್ ಗಳನ್ನು ರಚನೆ ಮಾಡಲಾಗುತ್ತಿದ್ದು, ಚುನಾವಣಾ ಬೂತ್ ಗಳ ಮಾದರಿಯಲ್ಲಿ ವಿತರಣೆ ಕೇಂದ್ರಗಳನ್ನು ರಚಿಸಲಾಗುತ್ತಿದೆ. ಅಲ್ಲದೆ ಕೊರೊನಾ ಲಸಿಕೆ ಕೊಟ್ಟ ಬಳಿಕ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಸಹ ಸೂಚಿಸಲಾಗುತ್ತದೆ. ಲಸಿಕೆಯ ಡೋಸ್ ಕೊಟ್ಟ ವ್ಯಕ್ತಿಗಳ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಲಸಿಕೆ ಬರುವ ದಿನಾಂಕದ ಬಗ್ಗೆ ಪ್ರಧಾನಿ ಮೋದಿಯವರು ಮಾಹಿತಿ ಕೊಡಲಿಲ್ಲ. ನಿಖರ ದಿನಾಂಕ ಹೇಳಲು ಸಾಧ್ಯವಿಲ್ಲ ಎಂದರು. ಲಸಿಕೆ ತಯಾರಿಕೆ ಹಂತಗಳ ಬಗ್ಗೆ ಮಾತ್ರ ಮಾಹಿತಿ ನೀಡಿದರು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಈ ವಿಡಿಯೋ ಸಂವಾದದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೈದರಾಬಾದ್ನಿಂದ ಭಾಗವಹಿಸಿ, ಕೇಂದ್ರ ಸರ್ಕಾರದ ಸೂಚನೆಯಂತೆ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳು, 10,000 ವ್ಯಾಕ್ಸಿನೇಟರ್ ಸಿಬ್ಬಂದಿ ಗುರುತಿಸಲಾಗಿದೆ. ರಾಜ್ಯದಲ್ಲಿ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದ್ದು, ಪಶು ಸಂಗೋಪನೆ ಇಲಾಖೆ, ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನೂ ಬಳಸಲಾಗುವುದು ಎಂದು ತಿಳಿಸಿದರು.