– ಮೂರು ಮಾದರಿಯ ತಂಡವನ್ನು ಪ್ರಕಟಿಸಿದ ಬಿಸಿಸಿಐ
– ಟೆಸ್ಟ್ ತಂಡದಿಂದ ಇಶಾಂತ್ ಶರ್ಮಾ ಹೊರಕ್ಕೆ
ಬೆಂಗಳೂರು: ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಟೀಂ ಇಂಡಿಯಾದ ಟಿ20, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಪ್ರಕಟ ಮಾಡಿದೆ.
ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಓಪನಿಂಗ್ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಆಸ್ಟ್ರೇಲಿಯಾ ಪ್ರವಾಸಕ್ಕೆ ಅಲಭ್ಯರಾಗಿದ್ದಾರೆ. ರೋಹಿತ್ ಶರ್ಮಾ ಅಲಭ್ಯರಾದ ಕಾರಣ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕರಾಗಿರುವ ಕೆಎಲ್ ರಾಹುಲ್ ಅವರಿಗೆ ಉಪನಾಯಕನ ಸ್ಥಾನ ಸಿಕ್ಕಿದೆ.
Advertisement
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಡಬಲ್ ಸೂಪರ್ ಓವರ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದ ಸಮಸ್ಯೆ ಎದುರಿಸಿದ್ದರು. ಬಳಿಕ ಮುಂಬೈ ಪರ ಸತತ 2 ಪಂದ್ಯಗಳಲ್ಲಿ ರೋಹಿತ್ ಆಡಿಲ್ಲ. ಹೀಗಾಗಿ ಅವರ ಗಾಯದ ಸಮಸ್ಯೆ ಗಂಭೀರವಾಗಿರುವ ಕಾರಣ ಆಸ್ಟ್ರೇಲಿಯಾ ಪ್ರವಾಸಕ್ಕೆ ಗೈರಾಗಿದ್ದಾರೆ.
Advertisement
Advertisement
ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವ ವೇಳೆ ವೇಗಿ ಇಶಾಂತ್ ಶರ್ಮಾ ಕೂಡ ಗಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿಲ್ಲ. ಈ ಇಬ್ಬರು ಆಟಗಾರರ ಫಿಟ್ನೆಸ್ ಬಗ್ಗೆ ಪರಾಮರ್ಶಿಸಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
Advertisement
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲಿಗೆ ತಲಾ ಮೂರು ಟಿ20 ಮತ್ತು ಏಕದಿನ ಸರಣಿ ಆಡಲಿದ್ದು, ಬಳಿಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಭಾರತ ತಂಡಗಳ ಜೊತೆಗೆ 4 ಯುವ ವೇಗಿಗಳಾದ ಕಮಲೇಶ್ ನಾಗರಕೋಟಿ, ಕಾರ್ತಿಕ್ ತ್ಯಾಗಿ, ಇಶಾನ್ ಪೊರೆಲ್ ಮತ್ತು ಟಿ ನಟರಾಜನ್ ನೆಟ್ ಬೌಲರ್ಗಳಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಡೆಲ್ಲಿ ಕ್ಯಾಪಿಟಲ್ಸ್ ಎದುರು 20 ರನ್ಗೆ 5 ವಿಕೆಟ್ ಪಡೆದು ಮಿಂಚಿದ ಸ್ಪಿನ್ನರ್ ವರುಣ್ ಚಕ್ರವರ್ತಿ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ.
ರಿಷಭ್ ಪಂತ್ ಸೀಮಿತ ಓವರ್ಗಳ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದು, ಟಿ20ಯಲ್ಲಿ ಸಂಜು ಸ್ಯಾಮ್ಸನ್ ಹೆಚ್ಚುವರಿ ವಿಕೆಟ್ಕೀಪರ್ ಆಗಿ ಸ್ಥಾನ ಪಡೆದಿದ್ದಾರೆ.
ಟಿ20 ತಂಡ
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ.
ಏಕದಿನ ತಂಡ
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್.
NEWS – Four additional bowlers – Kamlesh Nagarkoti, Kartik Tyagi, Ishan Porel and T. Natarajan – will travel with the Indian contingent.
The BCCI Medical Team will continue to monitor the progress of Rohit Sharma and Ishant Sharma. #AUSvIND
— BCCI (@BCCI) October 26, 2020
ಟೆಸ್ಟ್ ತಂಡ
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ಕೀಪರ್), ರಿಷಭ್ ಪಂತ್ (ವಿಕೆಟ್ಕೀಪರ್), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್.