ಚೆನ್ನೈ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತಿಗೆ 38 ವರ್ಷದ ಮಹಿಳೆಯೊಬ್ಬರು ಮದ್ಯ ತಂದುಕೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ತಮಿಳುನಾಡಿನ ಕುದ್ದಲೂರಿನ ಚಿದಂಬರಂನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪತಿಗೆ ಮದ್ಯ ತಂದುಕೊಟ್ಟಿದ್ದಕ್ಕೆ ಮಹಿಳೆಯನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಹಿಳೆಯ ಪತಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
Advertisement
Advertisement
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಟಿ.ಮುತ್ತುಕುಮಾರ್(48) ಅವರಿಗೆ ವಾರದ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತು. ನಂತರ ಚಿಕಿತ್ಸೆಗಾಗಿ ಆರ್ಎಂಎಂಎಂಸಿಎಚ್ ಗೆ ದಾಖಲಾಗಿದ್ದರು. ಬುಧವಾರ ಇವರ ಪತ್ನಿ ಎಂ.ಕಲೈಮಂಗೈ ಅವರು ಆಸ್ಪತ್ರೆಗೆ ಊಟದ ಬ್ಯಾಗ್ ನೀಡಲು ಬಂದಿದ್ದಾರೆ. ಪತ್ನಿ ಊಟ ನೀಡಿ ಮನೆಗೆ ತೆರಳಿದ ಕೆಲವೇ ಹೊತ್ತಿನಲ್ಲಿ ಮುತ್ತುಕುಮಾರನ್ ಆಸ್ಪತ್ರೆಯ ವಾರ್ಡ್ನಲ್ಲಿ ಗಲಾಟೆ ಮಾಡಿದ್ದಾನೆ. ಇದರಿಂದ ಇತರೆ ರೋಗಿಗಳಿಗೆ ತೊಂದರೆಯಾಗಿದ್ದು, ಈ ಕುರಿತು ರೋಗಿಗಳು ಆಸ್ಪತ್ರೆ ಆಡಳಿತ ಮಂಡಳಿಗೆ ತಿಳಿಸಿದ್ದಾರೆ.
Advertisement
Advertisement
ಇತರೆ ರೋಗಿಗಳು ಮಾಹಿತಿ ನೀಡುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ಹಾಗೂ ವಿಎ ವಾರ್ಡ್ಗೆ ತೆರಳಿದ್ದು, ಈ ವೇಳೆ ಮುತ್ತುಕುಮಾರ್ ಕೂಗಾಟ, ಚೀರಾಟ ಮಾಡುತ್ತಿದ್ದುದು ಕಂಡಿದೆ. ಈ ವೇಳೆ ವಿಚಾರಣೆ ನಡೆಸಿದಾಗ ಪತ್ನಿ ನೀಡಿದ ಊಟದ ಬ್ಯಾಗ್ನಲ್ಲಿ ಮದ್ಯವನ್ನೂ ನೀಡಿರುವುದಾಗಿ ತಿಳಿಸಿದ್ದಾನೆ. ನಂತರ ವಿಎ ಚಿದಂಬರಂ ಅಣ್ಣಾಮಲೈ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಧಿಕಾರಿ ದೂರಿನ ಆಧಾರದ ಮೇಲೆ ಪೊಲೀಸರು ಮುತ್ತುಕುಮಾರನ್ ಹಾಗೂ ಪತ್ನಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 269(ಸೋಂಕು ಹರಡುವ ಕುರಿತು ನಿರ್ಲಕ್ಷ್ಯ), 271(ಕ್ವಾರಂಟೈನ್ ನಿಯಮ ಉಲ್ಲಂಘನೆ) ಹಾಗೂ 294ಬಿ(ಅಸಭ್ಯ ವರ್ತನೆ) ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತು ತನಿಖೆ ಮುಂದುವರಿಸಿದ್ದಾರೆ.