ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದೆ.
Advertisement
ಬೆಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು, 6 ಜಿಲ್ಲೆಗಳನ್ನು ಬಿಟ್ಟು ಉಳಿದ 24 ಜಿಲ್ಲೆಗಳಲ್ಲಿ ಮಳೆ ಆಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ. ಜೂನ್ 1ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಕೊರೊನಾ ಆತಂಕದ ನಡುವೆಯೇ ಬುಧವಾರ ಸುರಿದ ರೋಹಿಣಿ ಮಳೆಗೆ ಬೆಂಗಳೂರು ತತ್ತರಿಸಿದೆ. ಯಲಹಂಕ, ಸಂಪಿಗೆಹಳ್ಳಿ, ಬ್ಯಾಟರಾಯನಪುರ, ಮಲ್ಲೇಶ್ವರಂ, ಮಾನ್ಯತಾ ಟೆಕ್ಪಾರ್ಕ್, ಥಣಿಸಂದ್ರ, ರಾಮಮೂರ್ತಿ ನಗರ ಸೇರಿದಂತೆ ಹಲವಡೆ ಗುಡುಗು ಸಮೇತ ಸುರಿದ ಭಾರೀ ಮಳೆಗೆ ಮರಗಳು ನೆಲಕ್ಕುರುಳಿದವು. ಕಾರುಗಳು ಜಖಂಗೊಂಡಿದ್ದವು.