ಬೆಂಗಳೂರು: ಇಂದು ಕರ್ನಾಟಕದಲ್ಲಿ ದಾಖಲೆಯ ಒಟ್ಟು 39,047 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 229 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 22,596 ಮಂದಿಗೆ ಕೊರೊನಾ ದೃಢಪಟ್ಟಿದ್ದು, 137 ಜನ ಬಲಿಯಾಗಿದ್ದಾರೆ.
Advertisement
ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,28,884ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 1,33,077 ಮಂದಿಗೆ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,39,822 ಕ್ಕೆ ಏರಿಕೆ ಕಂಡಿದೆ. ಈ ಪೈಕಿ 10,95,883 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Advertisement
Advertisement
ಒಟ್ಟು ಇಲ್ಲಿಯವರೆಗೆ 15,036 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 2,192 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 17,226 ಆಂಟಿಜನ್ ಟೆಸ್ಟ್ 1,54,771 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,71,997 ಕೊರೊನಾ ಪರೀಕ್ಷೆ ಮಾಡಲಾಗಿದೆ.
Advertisement
ಮೈಸೂರು 1,759, ಕೋಲಾರ 1,194, ತುಮಕೂರು 1,174, ಬಳ್ಳಾರಿ 1,106, ಹಾಸನ 1,001, ಮಂಡ್ಯ 935, ಕಲಬುರಗಿ 901 ಮಂದಿಗೆ ಸೋಂಕು ಬಂದಿದೆ. ಒಟ್ಟು 2,192 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 842, ಕಲಬುರಗಿ 354, ತುಮಕೂರು 159, ಧಾರವಾಡ 122 ಮತ್ತು ಬೆಳಗಾವಿಯಲ್ಲಿ 101 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.